Ad imageAd image

ವಾಹನ ಸವಾರರಿಗೆ ಗುಡ್ ನ್ಯೂಸ್ : ನ. 20ರ ವರಗೆ HSRP ನಂಬರ್ ಪ್ಲೇಟ್ ವಿಸ್ತರಣೆ 

Bharath Vaibhav
ವಾಹನ ಸವಾರರಿಗೆ ಗುಡ್ ನ್ಯೂಸ್ : ನ. 20ರ ವರಗೆ HSRP ನಂಬರ್ ಪ್ಲೇಟ್ ವಿಸ್ತರಣೆ 
WhatsApp Group Join Now
Telegram Group Join Now

ಬೆಂಗಳೂರು : ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ. ಈ ಮೂಲಕ ವಾಹನ ಸವಾರರಿಗೆ ಗುಡ್ ನ್ಯೂಸ್ ಸಿಕ್ಕಂತಾಗಿದೆ.

‘HSRP’ ನಂಬರ್ ಪ್ಲೇಟ್ ಅಳವಡಿಸದವರಿಗೆ ದಂಡ ವಿಧಿಸುವ ಸಂಬಂಧ ನಾಳೆ ಹೈಕೋರ್ಟ್ ನಿಂದ ಮಹತ್ವದ ಆದೇಶ ಪ್ರಕಟವಾಗಿದೆ.

ನಂಬರ್ ಪ್ಲೇಟ್ ಅಳವಡಿಕೆಗೆ ಕಾಲಾವಕಾಶ ಕೋರಿ ಹಿರಿಯ ವಕೀಲ ದೇವದತ್ ಕಾಮತ್ ಅವರು ಹೈಕೋರ್ಟ್‌ ಮನವಿ ಸಲ್ಲಿಸಿದ್ದರು. ಮನವಿ ಪರಿಗಣಿಸಿದ ನ್ಯಾಯಾಲಯ ವಿಚಾರಣೆ ಮುಂದೂಡಿಕೆ ಮಾಡಿದೆ. ಇದರ ಅರ್ಜಿ ವಿಚಾರಣೆ ನವೆಂಬರ್ 20 ಕ್ಕೆ ಮುಂದೂಡಲಾಗಿದ್ದು, ವಾಹನ ಸವಾರರಿಗೆ ರಿಲೀಫ್ ಸಿಕ್ಕಂತಾಗಿದೆ.

ರಾಜ್ಯದಲ್ಲಿ HSRP ನಂಬರ್ ಪ್ಲೇಟ್ ಅಳವಡಿಕೆ ಸಂಬಂಧ ಹೈಕೋರ್ಟ್ನಲ್ಲಿ ದಾಖಲಾಗಿರುವ ಪ್ರಕರಣ ವಿಚಾರಣೆ ಸೆ.18ರಂದು ನಡೆಯಲಿರುವ ಕಾರಣ ಕೋರ್ಟ್ ನಿರ್ದೇಶನ ನೀಡುವವರೆಗೆ ಹೈ ಸೆಕ್ಯೂರಿಟಿ ನೋಂದಣಿ ಫಲಕ ಹಾಕದವರ ವಿರುದ್ಧ ಕ್ರಮ ಕೈಗೊಳ್ಳದಿರಲು ಸಾರಿಗೆ ಇಲಾಖೆ ನಿರ್ಧರಿಸಿತ್ತು, ಈ ನಿಟ್ಟಿನಲ್ಲಿ ಹೈಕೋರ್ಟ್ ನಿರ್ದೇಶನಕ್ಕಾಗಿ ಸರ್ಕಾರ ಕಾಯುತ್ತಿತ್ತು. ಇದೀಗ ವಾಹನ ಸವಾರರಿಗೆ ಗುಡ್ ನ್ಯೂಸ್ ಎಂಬಂತೆ ಹೈಕೋರ್ಟ್ ಹೆಚ್‌ಎಸ್ ಆರ್ ಪಿ ನಂಬರ್ ಪ್ಲೇಟ್ ಅಳವಡಿಕೆ ಗಡುವು ನ.20 ರವರೆಗೆ ವಿಸ್ತರಣೆ ಮಾಡಿದೆ.

ಆನ್ಲೈನ್ ಮೂಲಕ ಅಳವಡಿಕೆ ಹೇಗೆ?

ಸ್ಕ್ಯಾನ್ ಮಾಡಿ

. ಎಚ್‌ಎಸ್‌ಆರ್ಪಿ ಮೇಲೆ ಕ್ಲಿಕ್ ಮಾಡಿ

• ವಾಹನದ ಮೂಲ ವಿವರಗಳನ್ನು ಭರ್ತಿ ಮಾಡಿ

• ನಂಬರ್ ಪ್ಲೇಟ್ ಅಳವಡಿಕೆಗೆ ಸ್ಥಳ ಆಯ್ದುಕೊಂಡರೆ ಅವರೇ ಬ೦ದು ಫಿಟ್ ಮಾಡಿಕೊಡುತ್ತಾರೆ2019ರ ಏಪ್ರಿಲ್ 1ಕ್ಕಿಂತ ಹಿಂದಿನ ವಾಹನಗಳು ಎಚ್‌ಎಸ್‌ಆರ್ಪಿ ಅಳವಡಿಸಿಕೊಳ್ಳಬೇಕು

ಆದರೆ, ವಾಹನ ಮಾಲೀಕರು ಆಸಕ್ತಿ ತೋರಿಸದ ಕಾರಣ 2024ರ ಫೆಬ್ರವರಿವರೆಗೆ ಗಡುವು ವಿಸ್ತರಿಸಲಾಗಿತ್ತು..ಹೆಚ್ಚಿನ ವಾಹನಗಳ ಮಾಲೀಕರು HSRP ಅಳವಡಿಸಿಕೊಳ್ಳದ ಹಿನ್ನೆಲೆಯಲ್ಲಿ ಜುಲೈ ಮತ್ತು ಸೆಪ್ಟಂಬರ್ 15ಕ್ಕೆ ಎರಡು ಬಾರಿ ಗಡುವು ವಿಸ್ತರಿಸಿ ಸಾರಿಗೆ ಇಲಾಖೆ ಆದೇಶಿಸಿತ್ತು.

ಇದೇ ಸೆಪ್ಟೆಂಬರ್ 15ಕ್ಕೆ ರಾಜ್ಯ ಸರ್ಕಾರ ನೀಡಿದ್ದ ಗಡುವು ಮುಕ್ತಾಯವಾಗಲಿದೆ. ಹೀಗಾಗಿ ಸೆ. 16ರಿಂದ HSRP ಅಳವಡಿಸದ ವಾಹನಗಳಿಗೆ ದಂಡ ವಿಧಿಸಲು ಸಾರಿಗೆ ಇಲಾಖೆ ನಿರ್ಧರಿಸಿದೆ ಎಂದು ಹೇಳಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!