ಬೆಂಗಳೂರು : ರಾಜ್ಯದ ಸರ್ಕಾರದ ಗೃಹಲಕ್ಷ್ಮೀ ಯೋಜನೆಯಡಿ 2,000 ರೂ. ಸಿಗದೇ ನಿರಾಸೆಗೊಂಡ ಮಹಿಳೆಯರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಎಂದು ತಿದ್ದುಪಡಿಗೆ ಇಂದಿನಿಂದ ಮತ್ತೆ ಅವಕಾಶ ನೀಡಿದೆ.
ಬಿಪಿಎಲ್ ಕಾರ್ಡ್ನಲ್ಲಿ ಪುರುಷರು ಮುಖ್ಯಸ್ಥರಾಗಿದ್ದರಿಂದ ಮಹಿಳೆಯರಿಗೆ ಸರ್ಕಾರ ನೀಡುತ್ತಿರುವ 2000 ರೂ.ಗೃಹಲಕ್ಷ್ಮೀ ಯೋಜನೆಯಿಂದ ವಂಚಿತರಾಗಿದ್ದಾರೆ. ಇದೀಗ ಸರ್ಕಾರ, ಮನೆ ಮುಖ್ಯಸ್ಥರ ಹೆಸರು ಬದಲಾವಣೆಗೆ ಇಂದಿನಿಂದ ಸೆಪ್ಟೆಂಬರ್ 10 ರವರೆಗೆ ಅವಕಾಶ ನೀಡಿದೆ.
ಬಿಪಿಎಲ್ ಕಾರ್ಡ್ ನಲ್ಲಿ ಮಹಿಳೆಯರೇ ಮುಖ್ಯಸ್ಥರಿರಬೇಕು. ವಯಸ್ಕ ಮಹಿಳೆ ಮುಖ್ಯಸ್ಥರಿದ್ದರೆ ಮಾತ್ರ ಬಿಪಿಎಲ್ ಸೌಲಭ್ಯ ದೊರೆಯಲಿದೆ.
ಆದರೆ ಮನೆಯ ಮಹಿಳೆ ಇದ್ದರೂ ಗೃಹಲಕ್ಷ್ಮಿ 2,000 ರೂ. ಸಿಗದೆ ನಿರಾಸೆಗೊಂಡ ಮಹಿಳೆಯರು ರೇಷನ್ ಕಾರ್ಡ್ ನಲ್ಲಿ ಮನೆಯ ಯಜಮಾನಿ ಎಂದು ತಿದ್ದುಪಡಿ ಮಾಡಲು ಸೆಪ್ಟೆಂಬರ್ 1ರಿಂದ ಸೆ,10ರವರೆಗೆ ಅವಕಾಶ ಕಲ್ಪಿಸಲಾಗಿದೆ.