ಬೆಂಗಳೂರು : ಬಿಪಿಎಲ್ ಕಾರ್ಡ್ ನಿರೀಕ್ಷೆಯಲ್ಲಿದವರಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದ್ದು, ಶೀಘ್ರವೇ ಹೊಸ ಕಾರ್ಡ ವಿತರಣೆ ಮಾಡಲಾಗುತ್ತದೆ ಎಂದು ಸಚಿವ ಕೆ.ಹೆಚ್ ಮುನಿಯಪ್ಪ ಹೇಳಿದ್ದಾರೆ.1.73 ಲಕ್ಷ ಬಿಪಿಎಲ್ ಕಾರ್ಡ್ಗಳನ್ನು ಆದಷ್ಟು ಶೀಘ್ರ ವಿತರಿಸಿ, ಪಡಿತರ ವಿತರಣೆಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಆಹಾರ ಸಚಿವ ಕೆ.ಎಚ್. ಮುನಿಯಪ್ಪ ತಿಳಿಸಿದ್ದಾರೆ.
ರಾಜ್ಯದಲ್ಲಿ 1.27 ಕೋಟಿ ಕುಟುಂಬಗಳಿಗೆ ಬಿಪಿಎಲ್ ಕಾರ್ಡ್ ನೀಡಿದ್ದೇವೆ. ಅನರ್ಹ ಬಿ.ಪಿ.ಎಲ್. ಕಾರ್ಡುಗಳನ್ನು ರದ್ದು ಪಡಿಸಿ, ಅರ್ಹರಿಗೆ ಬಿಪಿಎಲ್ ಕಾರ್ಡು ಒದಗಿಸಬೇಕು . ಸಿಂಧುತ್ವ ಪ್ರಮಾಣ ಪತ್ರ ಸಕಾಲದಲ್ಲಿ ನೀಡಬೇಕು. ಇವುಗಳನ್ನು ಬಾಕಿ ಉಳಿಸಿಕೊಳ್ಳದೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಇತ್ತೀಚೆಗಷ್ಟೇ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದರು.