Ad imageAd image
- Advertisement -  - Advertisement -  - Advertisement - 

ಗ್ರಾಮ ಪಂಚಾಯಿತಿ ನೌಕರರಿಗೆ ಸಿಹಿಸುದ್ದಿ : ಕನಿಷ್ಠ ವೇತನ ನಿಗದಿ 

Bharath Vaibhav
ಗ್ರಾಮ ಪಂಚಾಯಿತಿ ನೌಕರರಿಗೆ ಸಿಹಿಸುದ್ದಿ : ಕನಿಷ್ಠ ವೇತನ ನಿಗದಿ 
PRIYANKA KHARGE
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದ ಪಂಚಾಯಿತಿ ನೌಖರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಚಿವ ಪ್ರಿಯಾಂಕ್‌ ಖರ್ಗೆ ಹೇಳಿದ್ದಾರೆ.

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ್‌ ನೌಕರರ ಸಂಘವು ನಾಳೆ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಮುಷ್ಕರದ ಹಿನ್ನೆಲೆಯಲ್ಲಿ ಸಂಘದ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ ಅವರ ಬೇಡಿಕೆಗಳನ್ನು ಪೂರೈಸುವ ಭರವಸೆ ನೀಡಿದ್ದು, ನೌಕರರ ಸಂಘ ಸಲ್ಲಿಸಿದ 19 ಬೇಡಿಕೆಗಳ ಕುರಿತು ಸಂಘದ ಪ್ರತಿನಿಧಿಗಳೊಂದಿಗೆ ಚರ್ಚೆ ನಡೆಸಿ, ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೀರಗಂಟಿಗಳು ನಿರ್ವಹಿಸುವ ಕೆಲಸಗಳನ್ನು ವಿವಿಧೋದ್ದೇಶ ಎಂದು ನಿಗದಿಪಡಿಸಿರುವುದನ್ನು ಕೈಬಿಟ್ಟು ನಿರ್ದಿಷ್ಟ ಕೆಲಸ ನಿಗದಿ ಪಡಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದೆ.

ನೌಕರರ ಸಂಘದ ಮತ್ತೊಂದು ಬೇಡಿಕೆಯಾದ ಜನಸಂಖ್ಯೆಗೆ ಅನುಗುಣವಾಗಿ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೇರಿಸುವ ಕುರಿತು ಚರ್ಚಿಸಿಲಾಗಿದೆ ಎಂದು ತಿಳಿಸಿದ್ದಾರೆ.

ಪಂಚಾಯತಿ ನೌಕರರಿಗೆ ಕನಿಷ್ಠ ವೇತನವನ್ನು ನಿಗದಿ ಪಡಿಸುವ ನೌಕರರ ಬೇಡಿಕೆ ಕುರಿತು ಕಾರ್ಮಿಕ ಇಲಾಖೆ ಹಾಗೂ ಆರ್ಥಿಕ ಇಲಾಖೆಯ ಒಪ್ಪಿಗೆಗಾಗಿ ಕಳುಹಿಸಲಾಗಿದ್ದು ಸಂಬಂಧಪಟ್ಟವರೊಂದಿಗೆ ಚರ್ಚಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು.

ಗ್ರಾಮ ಪಂಚಾಯತಿಗಳಲ್ಲಿ ಕಾರ್ಯನಿರ್ವಹಿಸುವ ನೌಕರರಿಗೆ ವರ್ಗಾವಣೆ ಅವಕಾಶ, ಆದಾಯಕ್ಕೆ ಅನುಗುಣವಾಗಿ ಕರವಸೂಲಿಗಾರರ ಹುದ್ದೆಗಳ ನಿಗದಿ, ಮುಂತಾದ ಬೇಡಿಕೆಗಳು ಪರಿಶೀಲನೆಯ ಹಂತದಲ್ಲಿದೆ.

ಗ್ರಾಮ ಪಂಚಾಯತಿಗಳಲ್ಲಿ ಸ್ವಚ್ಛತಾಗಾರರ ಹುದ್ದೆಗಳನ್ನು ಐಪಿಡಿ ಸಾಲಪ್ಪ ವರದಿಗೆ ಅನುಗುಣವಾಗಿ ಸೃಜಿಸಬೇಕೆಂಬ ನೌಕರರ ಸಂಘದ ಬೇಡಿಕೆಯ ಕುರಿತು ಸಾಲಪ್ಪನವರ ವರದಿಯು ನಗರ ಪ್ರದೇಶಕ್ಕೆ ಸಂಬಂಧಿಸಿದ್ದು ಗ್ರಾಮೀಣ ಪ್ರದೇಶಕ್ಕೆ ಅನ್ವಯಿಸುವಂತೆ ವರದಿಯನ್ನು ಸಿದ್ಧಪಡಿಸಲು ಉಪ ಸಮಿತಿ ರಚಿಸಲಾಗುವುದು.

ಗ್ರಾಮಪಂಚಾಯತಿಗಳ ಸಿಬ್ಬಂದಿಗಳ ಕುಂದುಕೊರತೆಗಳನ್ನು ನೀಗಿಸಲು ಮತ್ತು ಬೇಡಿಕೆಗಳನ್ನು ಪೂರೈಸಲು ನಮ್ಮ ಸರ್ಕಾರ ಸದಾ ಬದ್ದವಾಗಿರಲಿದೆ ಎಂದರು.

 

WhatsApp Group Join Now
Telegram Group Join Now
Share This Article
error: Content is protected !!