——————————————————ಆಸ್ಟ್ರೇಲಿಯಾ ವಿರುದ್ಧ ಮೊದಲ ಏಕದಿನ ಪಂದ್ಯ
ಕೇರ್ನ್ಸ್: ಆಸ್ಟ್ರೇಲಿಯಾ ಪ್ರವಾಸದಲ್ಲಿರುವ ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡವು ಆತಿಥೇಯ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯವನ್ನು ಆಡುತ್ತಿದ್ದು, 15 ಓವರುಗಳಲ್ಲಿ ವಿಕೆಟ್ ನಷ್ಟವಿಲ್ಲದೇ 80 ರನ್ ಗಳಿಸಿ ಉತ್ತಮ ಆರಂಭ ಕಂಡಿತ್ತು.
ಕ್ಯಾಜಿಲಿಸ್ ಕ್ರೀಡಾಂಗಣದಲ್ಲಿ ನಡೆದಿರುವ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡುತ್ತಿದ್ದ ದಕ್ಷಿಣ ಆಫ್ರಿಕಾ ತಂಡದ ಆರಂಭ ಆಟಗಾರರು ತಂಡಕ್ಕೆ ಭದ್ರ ಬುನಾದಿ ಹಾಕಿದ್ದಾರೆ. ಆರಂಭ ಆಟಗಾರರಾದ ಆಡಿನ್ ಮಾರ್ಕಮ್ 48 ( 53 ಎಸೆತ, 6 ಬೌಂಡರಿ) ಹಾಗೂ ರೇನ್ ರಿಕಲ್ಟನ್ 33 ( 42 ಎಸೆತ, 3 ಬೌಂಡರಿ) ಗಳಿಸಿ ಬ್ಯಾಟ್ ಮಾಡುತ್ತಿದ್ದರು.




