Ad imageAd image

ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಸಚಿವ ಮಧು ಬಂಗಾರಪ್ಪ

Bharath Vaibhav
ಶರಾವತಿ ಸಂತ್ರಸ್ತರ ಸಮಸ್ಯೆಯ ಶಾಶ್ವತ ಪರಿಹಾರಕ್ಕೆ ಸರ್ಕಾರ ಬದ್ಧ : ಸಚಿವ ಮಧು ಬಂಗಾರಪ್ಪ
WhatsApp Group Join Now
Telegram Group Join Now

ಮಲೆನಾಡಿನ ಜನರ ಆರಾಧ್ಯ ದೈವ ಶ್ರೀ ಸಿಗಂದೂರೇಶ್ವರಿ ಅಮ್ಮನವರ ಕೃಪೆಯಿಂದ ನಾಡಿನೆಲ್ಲೆಡೆ ಸಕಾಲದಲ್ಲಿ ಮಳೆಯಾಗಿದ್ದು, ಕೆರೆ ಕಟ್ಟೆ ಕಾಲುವೆಗಳು ಭರ್ತಿಯಾಗಿವೆ ಮಾತ್ರವಲ್ಲ ಉತ್ತಮ ಬೆಳೆ ಬರುವ ನಿರೀಕ್ಷೆ ಇದೆ. ಇದರಿಂದಾಗಿ ಸಹಜವಾಗಿ ಸಂತಸ ಮೂಡಿದೆ ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಎಸ್‌.ಬಂಗಾರಪ್ಪ ಅವರು ಹೇಳಿದರು.

ಅವರು ಇಂದು ಸಾಗರ ತಾಲೂಕಿನ ಸಿಗಂದೂರಿನ ಶ್ರೀ ಚೌಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ನವರಾತ್ರಿ ಅಂಗವಾಗಿ ಏರ್ಪಡಿಸಲಾಗಿದ್ದ ಸಿಗಂದೂರು ದಸರಾ ಸಂಭ್ರಮ 25 ನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು. ಶ್ರೀಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಅಗತ್ಯ ನೆರವು ಮತ್ತು ಸಹಕಾರವನ್ನು ನೀಡುವ ಮೂಲಕ ಅಭಿವೃದ್ಧಿ ಕಾರ್ಯಗಳಿಗೆ ಸಹಕಾರ ನೀಡಿವೆ. ಎಂದಿನಂತೆ ಮುಂದೆಯೂ ಶ್ರೀ ಕ್ಷೇತ್ರದ ಸರ್ವಾಂಗೀಣ ವಿಕಾಸಕ್ಕೆ ನೆರವು ನೀಡಲಾಗುವುದು ಎಂದರು. ಹಲವು ದಶಕಗಳಿಂದ ಇತ್ಯರ್ಥವಾಗದೇ ಉಳಿದಿರುವ ಶರಾವತಿ ಸಂತ್ರಸ್ತರು, ಅರಣ್ಯ ಭೂಮಿ ಸಾಗುವಳಿದಾರರ ಹಿತ ಕಾಯಲು ಸರ್ಕಾರ ಹಿಂದೆ ಹೇಳಿದ ಮಾತಿನಂತೆ ಬದ್ಧವಾಗಿದೆ. ಅರಣ್ಯಗಳಲ್ಲಿ ಹಲವು ದಶಕಗಳಿಂದ ವಾಸವಾಗಿರುವ ಹಾಗೂ ಸಾಗುವಳಿದಾರರನ್ನು ಒಕ್ಕಲೆಬ್ಬಿಸದಂತೆ ಈಗಾಗಲೇ ಸರ್ಕಾರ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.

ಅದಕ್ಕೆ ಸಂಬಂಧಿಸಿದಂತೆ ಹಾಗೂ ದೇಶದ ಸರ್ವೋಚ್ಚ ನ್ಯಾಯಾಲಯದ ಸೂಚನೆಯಂತೆ ಸಮೀಕ್ಷಾ ಕಾರ್ಯ ಪೂರ್ಣಗೊಂಡಿದ್ದು ಅದರ ವರದಿಯನ್ನು ಸಲ್ಲಿಸಲಾಗಿದೆ. ಸಂತ್ರಸ್ತರು ಯಾವುದೇ ಆತಂಕಪಡುವ ಅಗತ್ಯವಿಲ್ಲ. ನಿರೀಕ್ಷೆಯಂತೆ ಉತ್ತಮ ಹಾಗೂ ನಮ್ಮ ಪರವಾದ ತೀರ್ಪು ಬರುವ ಆಶಯವಿದೆ ಎಂದವರು ನುಡಿದರು.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!