Ad imageAd image

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ದಿಢೀರ್ ಏರುಪೇರು : ಆಸ್ಪತ್ರೆಗೆ ದಾಖಲು 

Bharath Vaibhav
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಆರೋಗ್ಯದಲ್ಲಿ ದಿಢೀರ್ ಏರುಪೇರು : ಆಸ್ಪತ್ರೆಗೆ ದಾಖಲು 
WhatsApp Group Join Now
Telegram Group Join Now

ಬೆಂಗಳೂರು: ಕರ್ನಾಟಕದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರು ಉಂಟಾಗಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸುತ್ತಿರುವುದಾಗಿ ತಿಳಿದು ಬಂದಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ತೀವ್ರ ತರದ ವೈರಲ್ ಫೀವರ್ ನಿಂದ ಬಳಲುತ್ತಿರುವುದಾಗಿ ತಿಳಿದು ಈ ಹಿನ್ನಲೆಯಲ್ಲೇ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಥಾವರ್ ಚಂದ್ ಗೆಹ್ಲೋಟ್ ಅವರನ್ನು ಪರೀಕ್ಷೆಗೆ ಒಳಪಡಿಸಿದಂತ ವೈದ್ಯರು, ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂಬುದಾಗಿ ವೈದ್ಯರು ತಿಳಿಸಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!