Ad imageAd image

ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ 

Bharath Vaibhav
ಸಚಿವ ಜಮೀರ್ ಅಹ್ಮದ್ ವಿರುದ್ಧ ಕ್ರಮಕ್ಕೆ ರಾಜ್ಯಪಾಲರ ಸೂಚನೆ 
WhatsApp Group Join Now
Telegram Group Join Now

ಬೆಂಗಳೂರು: ಮುಡಾ ಹಗರಣದ ಕುರಿತ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚನೆ ನೀಡಿದ್ದಾರೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆಗೆ ಆದೇಶಿಸಿದ್ದ ರಾಜ್ಯಪಾಲರ ಕ್ರಮ ಸೂಕ್ತವಾಗಿದೆ ಎಂದಿದ್ದ ಹೈಕೋರ್ಟ್ ತೀರ್ಪಿನ ಬಗ್ಗೆ ಸಚಿವ ಜಮೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು.

ನ್ಯಾಯಾಲಯದ ತೀರ್ಪಿನ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿರುವ ಕಾರಣಕ್ಕೆ ಸಚಿವ ಜಮೀರ್ ಅಹ್ಮದ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರದ ಅಡ್ವಕೇಟ್ ಜನರಲ್ ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸೂಚಿಸಿದ್ದಾರೆ.

ಸಚಿವ ಜಮೀರ್ ಅಹ್ಮದ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಕ್ಕೆ ಸಚಿವರ ವಿರುದ್ಧ ಟಿ.ಜೆ ಅಬ್ರಾಹಂ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರು ಸೂಚಿಸಿದ್ದಾರೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!