ಬೆಂಗಳೂರು : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ಬಿ ನಾಗೇಂದ್ರ ಗೆ ಸಂಕಷ್ಟ ಎದುರಾಗಿದೆ. ಇದೀಗ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು ನಾಗೇಂದ್ರ ಇ.ಡಿ ತನಿಖೆ ಎದುರಿಸಬೇಕಾಗಿದೆ
ವಾಲ್ಮೀಕಿ ನಿಗಮದ ಹಣ ದುರ್ಬಳಕೆ ಪ್ರಕರಣ ಸಂಬಂಧ ಇ.ಡಿ ದಾಖಲಿಸಿರುವ ಕೇಸ್ ರದ್ದತಿ ಕೋರಿ ಮಾಜಿ ಸಚಿವ ಬಿ.ನಾಗೇಂದ್ರ ಮತ್ತು ಜೆ ಪದ್ಮನಾಭ ಸಲ್ಲಿಸಿದ್ದ ಅರ್ಜಿಯೂ ಮುಂದೂಡಲಾಗಿತ್ತು.
ಈ ಮಧ್ಯೆ ತನಿಖೆಗೆ ಅನುಮತಿ ಕೋರಿ ರಾಜ್ಯಪಾಲರ ಮೊರೆ ಹೋಗಿದ್ದ ಇ.ಡಿ ಹೆ ಈಗ ಗ್ರೀನ್ ಸಿಗ್ನಲ್ ಸಿಕ್ಕಿದೆ. ವಾಲ್ಮೀಕಿ ನಿಗಮದ ಬ್ಯಾಂಕ್ ಖಾತೆಯಿಂದ ಅಕ್ರಮವಾಗಿ ರೂ.95 ಕೋಟಿ ವರ್ಗಾವಣೆ ಆರೋಪದಲ್ಲಿ ಇ.ಡಿ. ನಾಗೇಂದ್ರರನ್ನು ಅರೆಸ್ಟ್ ಮಾಡಿತ್ತು.