ಬೆಂಗಳೂರು: ನಾಲ್ಕು ಸಾರಿಗೆ ನಿಗಮಗಳು ಸಾಲ ಪಡೆಯಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ನಾಲ್ಕು ಸಾರಿಗೆ ನಿಗಮಗಳ ಸಿಬ್ಬಂದಿಗೆ ಭವಿಷ್ಯ ನಿಧಿ , ಇಂಧನ, ಸೇರಿದಂತೆ ಬಾಕಿ ಹೊಣೆಗಾರಿಕೆಯನ್ನು ಸಾರಿಗೆ ನಿಗಮಗಳು ಉಳಿಸಿಕೊಂಡಿವೆ.
ಹೀಗಾಗಿ ಬಾಕಿ ಹಣ ಪಾವತಿಗೆ ನಾಲಾ ಸಾರಿಗೆ ನಿಗಮಗಳಿಗೆ ಹಣಕಾಸು ಸಂಸ್ಥೆಗಳಿಂದ 2000 ಕೋಟಿ ರೂಪಾಯಿ ಸಾಲ ಪಡೆಯಲು ರಾಜ್ಯ ಸರ್ಕಾರದ ಅನುಮತಿ ನೀಡಿದೆ.
ಸಾಲ ಪಡೆಯಲು ಷರತ್ತು ಬದ್ಧ ಖಾತರಿ ನೀಡಲಾಗಿದೆ. ಸಾರಿಗೆ ಸಂಸ್ಥೆಗಳು ಬಾಕಿ ಉಳಿಸಿಕೊಂಡಿರುವ ಡೀಸೆಲ್ ಶುಲ್ಕ, ಭವಿಷ್ಯನಿಧಿ ವಂತಿಗೆ ಪಾವತಿಸಲು ವಿವಿಧ ಹಣಕಾಸು ಸಂಸ್ಥೆಗಳಿಂದ 2 ಸಾವಿರ ಕೋಟಿ ರೂ. ಸಾಲ ತೆಗೆದುಕೊಳ್ಳಲು ಸರ್ಕಾರ ಅನುಮತಿ ನೀಡಿದೆ.
ಸಾರಿಗೆ ಸಂಸ್ಥೆಗಳು ನಷ್ಟದಲ್ಲಿವೆ ಎನ್ನುವ ವಿಪಕ್ಷಗಳ ಆರೋಪವನ್ನು ರಾಜ್ಯ ಸರ್ಕಾರ ನಿರಾಕರಿಸಿದ್ದು, ಸಂಸ್ಥೆಗಳ ವಿವಿಧ ಹೊಣೆಗಾರಿಕೆ ನಿರ್ವಹಿಸಲು ಸಾಲದ ಮೊರೆ ಹೋಗಿದೆ. ಮಂಗಳವಾರ ಈ ಬಗ್ಗೆ ಆದೇಶ ಹೊರಡಿಸಲಾಗಿದೆ.
ಕೆಎಸ್‌ಆರ್ಟಿಸಿ, ಬಿಎಂಟಿಸಿ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳು ಒಟ್ಟು 6330.25 ಕೋಟಿ ರೂಪಾಯಿ. ಬಾಕಿ ಉಳಿಸಿಕೊಂಡಿವೆ.