Ad imageAd image
- Advertisement -  - Advertisement -  - Advertisement - 

ಕ್ರಿಕೆಟ್ ಆಡುವ ವೇಳೆ ಹೃದಯಾಘಾತದಿಂದ ಗ್ರಾಪಂ ಸಿಬ್ಬಂದಿ ಸಾವು 

Bharath Vaibhav
ಕ್ರಿಕೆಟ್ ಆಡುವ ವೇಳೆ ಹೃದಯಾಘಾತದಿಂದ ಗ್ರಾಪಂ ಸಿಬ್ಬಂದಿ ಸಾವು 
WhatsApp Group Join Now
Telegram Group Join Now

ಬಜಪೆ : ಕ್ರಿಕೆಟ್ ಆಡುತ್ತಿರುವ ವೇಳೆ ಹೃದಯಾಘಾತದಿಂದ ಯುವಕನೊಬ್ಬ ಸಾವನಪ್ಪಿರುವ ದಾರುಣ ಘಟನೆ ಬಜಪೆಯ ಮೂಡುಪೆರಾರ ಕಾಯರಾಣೆಯಲ್ಲಿ ನಡೆದಿದೆ.

ಆನಂದ್ ಪೂಜಾರಿ (31) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಬಾನುವಾರ ಸಂಜೆ ಕಾಯರಾಣೆಯಲ್ಲಿ ಕ್ರಿಕೆಟ್ ಆಡುತ್ತಿರುವ ವೇಳೆ ಎದೆನೋವು ಕಾಣಿಸಿಕೊಂಡಿತ್ತು.ಕೂಡಲೇ ಅವರನ್ನು ಕೈಕಂಬ ಖಾಸಗಿ ಆಸ್ಪತ್ರೆ ಕರೆದೊಯ್ಯಲಾಗಿತ್ತು.

ಅಲ್ಲಿ ಆನಂದ್ ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ ಬಳಿಕ ಆಂಬ್ಯುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ವೇಳೆ ದಾರಿ ಮಧ್ಯದಲ್ಲಿ ಮೃತಪಟ್ಟಿದ್ದಾರೆ.

ಆನಂದ್ ಪೂಜಾರಿಯವರು 2012 ರಲ್ಲಿ ಮೂಡುಪೆರಾರ ಗ್ರಾಮ ಪಂಚಾಯತ್ ಸಿಬ್ಬಂದಿಯಾಗಿ ಕೆಲಸಕ್ಕೆ ಸೇರಿದ್ದರು. ಅಲ್ಲದೇ ರಾಜ್ಯ ಗ್ರಾಮ ಪಂಚಾಯತ್ ನೌಕರರ ಶ್ರೇಯಾಭಿವೃದ್ಧಿ ಸಂಘ ಇದರ ಮಂಗಳೂರು ತಾಲೂಕು ಸಮಿತಿಯ ಅಧ್ಯಕ್ಷರಾಗಿದ್ದರು.

WhatsApp Group Join Now
Telegram Group Join Now
Share This Article
error: Content is protected !!