ಬೆಳಗಾವಿ : ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924 ನಡೆಸಿದ್ದ ಕಾಂಗ್ರೆಸ್ ಅಧಿವೇಶನವು ಶತಮಾನ ಪೂರೈಸಿದ್ದರ ಸ್ಮರಣಾರ್ಥ ರಾಜ್ಯ ಕಾಂಗ್ರೆಸ್ ಜಿಲ್ಲೆಯಲ್ಲಿ ಇಂದು ಗಾಂಧಿ ಭಾರತ ಅಧಿವೇಶನ ಹಮ್ಮಿಕೊಂಡಿದ್ದು, ಗಾಂಧಿ ಪುತ್ಥಳಿ ಅನಾವರಣ ಮಾಡುವ ಮೂಲಕ ಚಾಲನೆ ನೀಡಲಾಯಿತು.
ಕಾರ್ಯಕ್ರಮದಲ್ಲಿ ಎಎಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಭಾಪತಿ ಬಸವರಾಜ್ ಹೊರಟ್ಟಿ, ಸಂಸದೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಹಲವು ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.
ಮಹಾತ್ಮ ಗಾಂಧೀಜಿಯವರು ಬೆಳಗಾವಿಯಲ್ಲಿ 1924 ನಡೆಸಿದ್ದ ಕಾಂಗ್ರೆಸ್ ಅಧಿವೇಶನವು ಶತಮಾನ ಪೂರೈಸಿದ ಹಿನ್ನಲೆ ಗಾಂಧಿಜೀಯ 25 ಅಡಿಯ ಕಂಚಿನ ಪುತ್ಥಳಿಯನ್ನು ನಿರ್ಮಿಸಲಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಅವರು ಅನಾವರಣಗೊಳಿಸಿದರು. ಈ ಪ್ರತಿಮೆಗೆ ಸುಮಾರು 20 ಟನ್ ಕಂಚನ್ನು ಬಳಸಲಾಗಿದೆ.
ಇಂದಿನ ಬೆಳಗಾವಿಯಲ್ಲಿ ನಡೆಯುತ್ತಿರುವ ಐತಿಹಾಸಿಕ ಕಾರ್ಯಕ್ರಮಕ್ಕೆ ಕಾಂಗ್ರೆಸ್ ನಾಯಕರ ದಂಡೇ ಹರಿದು ಬಂದಿದ್ದು, ಗಾಂಧಿ ಭಾರತ ಕಾರ್ಯಕ್ರಮ ಪ್ರಯುಕ್ತ ಬೆಳಗಾವಿ ನಗರ ಸಂಪೂರ್ಣ ಕಾಂಗ್ರೆಸ್‌ಮಯವಾಗಿದೆ. ನಗರದ ಪ್ರಮುಖ ರಸ್ತೆಗಳಲ್ಲಿ ರಾರಾಜೀಸುತ್ತಿವೆ ಕಾಂಗ್ರೆಸ್ ಬಾವುಟ, ಕೈ ನಾಯಕರ ಕಟೌಟ್‌ಗಳನ್ನು ನಿಲ್ಲಿಸಲಾಗಿದೆ.




