ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ರಾಜ್ಯದ ಖಾಸಗಿ ವೈದ್ಯಕೀಯ ಕಾಲೇಜುಗಳ ಶುಲ್ಕವನ್ನು ಶೇ. 10ರಷ್ಟು ಹೆಚ್ಚಳ ಮಾಡಲು ವೈದ್ಯಕೀಯ ಶಿಕ್ಷಣ ಇಲಾಖೆ ಗ್ರೀನ್ ಸಿಗ್ನಲ್ ನೀಡಿದೆ.
ರಾಜ್ಯದ ಖಾಸಗಿ ಕಾಲೇಜು ಆಡಳಿತ ಮಂಡಳಿ ಪ್ರತಿನಿಧಿಗಳು ಶೇಕಡ 15 ರಿಂದ 20 ರಷ್ಟು ಶುಲ್ಕ ಹೆಚ್ಚಳಕ್ಕೆ ಬೇಡಿಕೆ ಸಲ್ಲಿಸಿದ್ದು, ಶೇ.10ರಷ್ಟು ಶುಲ್ಕ ಹೆಚ್ಚಳಕ್ಕೆ ನಿರ್ಧರಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಹಂಚಿಕೆ ಮಾಡುವ ಸರ್ಕಾರಿ ವೈದ್ಕೀಯ ಕೋಟಾ ಸೀಟುಗಳಿಗೆ 1.40 ಲಕ್ಷ ರೂ ಹಾಗೂ ಖಾಸಗಿ ಕೋಟಾ ಸೀಟುಗಳಿಗೆ 11.88 ಲಕ್ಷ ರೂ. ನಿಗದಿಪಡಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ. ಈ ಮೂಲಕ ವೈದ್ಯಕೀಯ ವಿದ್ಯಾರ್ಥಿಗಳಿಗೆ ಬಿಗ್ ಶಾಕ್ ನೀಡಿದ್ದಾರೆ.