Ad imageAd image

450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ 

Bharath Vaibhav
450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್ 
WhatsApp Group Join Now
Telegram Group Join Now

ಬೆಂಗಳೂರು: ರಾಜ್ಯದಲ್ಲಿ ಖಾಲಿ ಇರುವಂತ 450 ಪೊಲೀಸ್ ಇಲಾಖೆಯ ಹುದ್ದೆಗಳ ನೇಮಕಾತಿಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಭರ್ತಿಗೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಪೊಲೀಸ್ ಹುದ್ದೆ ಆಕಾಂಕ್ಷಿಗಳಿಗೆ ಸಿಹಿಸುದ್ದಿಯನ್ನು ನೀಡಲಾಗಿದೆ.

ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದಂತ ಸಚಿವ ಮಹದೇವಪ್ಪ ಅವರು 22 ವಿಶೇಷ ಪೊಲೀಸ್ ಠಾಣೆಗಳ ಸ್ಥಾಪನೆಗೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ದೊರೆತಿದೆ.ಅಲ್ಲದೇ 450 ಹುದ್ದೆಗಳ ನೇಮಕಕ್ಕೆ ಮಂಜೂರಾತಿ ನೀಡಲಾಗಿದೆ ಎಂದು ತಿಳಿಸಿದರು.

ದೌರ್ಜನ್ಯ ಪ್ರಕರಣಗಳ ತುರ್ತು ವಿಲೇವಾರಿಗಾಗಿ ಠಾಣೆಗಳ ಸ್ಥಾಪನೆ ಮಾಡಲಾಗುತ್ತಿದೆ. ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಡಿ ಸ್ಥಾಪನೆ ಮಾಡಲಾಗುವುದು. ಪರಿಶಿಷ್ಟರ ಮೇಲಿನ ದೌರ್ಜನ್ಯ ತಡೆಗೆ ಒತ್ತು ನೀಡಲಾಗುತ್ತದೆ. ಇದು ದೇಶದಲ್ಲೇ ಮೊದಲ ಯೋಜನೆಯಾಗಿ ಎಂದರು.

ಪರಿಶಿಷ್ಟರ ಮೇಲೆ ದೌರ್ಜನ್ಯವಾದಾಗ ದೂರು ದಾಖಲು ಈ ಕ್ರಮ ವಹಿಸಲಾಗಿದೆ. ಸ್ಥಳೀಯ ಠಾಣೆಗಳಲ್ಲಿ ದೂರು ಸಲ್ಲಿಸಬೇಕು. ಅಲ್ಲಿಂದ ಈ ವಿಶೇಷ ಠಾಣೆಗೆ ವರ್ಗಾವಣೆಯಾಗಲಿದೆ. ಕೂಡಲೇ ಎಫ್ ಐಆರ್ ದಾಖಲಿಸಲು ಅವಕಾಶ ನೀಡಲಾಗುತ್ತಿದೆ ಎಂದು ಹೇಳಿದರು.

WhatsApp Group Join Now
Telegram Group Join Now
- Advertisement -  - Advertisement -  https://www.youtube.com/@BVNEWS5/videos
Share This Article
error: Content is protected !!