ಮೈಸೂರು : ಸಚಿವ ಸತೀಶ್ ಜಾರಕಿಹೊಳಿ ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಭೇಟಿ ರಾಜ್ಯ ರಾಜಕೀಯದಲ್ಲಿ ತಲ್ಲಣ ಸೃಷ್ಟಿಸಿದ್ದು, ವಿವಿಧ ರೀತಿಯ ಚರ್ಚೆಗಳು ರಾಜಕೀಯ ವಲಯದಲ್ಲಿ ಶುರುವಾಗಿದೆ.
ಈ ಮಧ್ಯೆ ಶಾಸಕ ಜಿಟಿ ದೇವೇಗೌಡ ಹೊಸ ಬಾಂಬ್ ಸಿಡಿಸಿದ್ದಾರೆ. ಮೈಸೂರಲ್ಲಿ ಮಾತಾಡಿದ ಅವರು , ಸತೀಶ್ ಜಾರಕಿಹೊಳಿ ಸಿಎಂ ಆಗಲು ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿಯಾಗಿರಬಹುದು.ರಾಜಕಾರಣದಲ್ಲಿ ಏನಾದ್ರೂ ಆಗಬಹುದು ಎಂದು ಹೇಳಿದ್ದಾರೆ.
ಸತೀಶ್ ಜಾರಕಿಹೊಳಿ ಅವರು 18 ಜೆಡಿಎಸ್ ಶಾಸಕರ ಬೆಂಬಲ ಕೇಳಿರಬಹುದು. ರಾಜಕಾರಣದಲ್ಲಿ ಏನು ಬೇಕಾದ್ರೂ ಆಗಬಹುದು. ಸದ್ಯದ ಪರಿಸ್ಥಿತಿ ನೋಡಿದರೆ ಅವರು ಬೇರೆ ಕಾರಣಕ್ಕೆ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿಲ್ಲ.ಮಾಜಿ ಪ್ರಧಾನಿ, ಕೇಂದ್ರ ಸಚಿವರನ್ನು ಭೇಟಿ ಮಾಡಿದ್ದಾರೆ ಅಂದ್ರೇ ಅದಕ್ಕೆ ಇದೇ ಕಾರಣ.
ಒಂದು ವೇಳೆ ಜೆಡಿಎಸ್ ಸತೀಶ್ ಜಾರಕಿಹೊಳಿಗೆ ಬೆಂಬಲ ನೀಡಿದರೂ ನಾನು ತಟಸ್ಥನಾಗಿರುತ್ತೇನೆ. ಈ ವಿಚಾರದಲ್ಲಿ ಮಾತ್ರ ಅಲ್ಲ ಎಲ್ಲಾ ವಿಚಾರದಲ್ಲೂ ನಾನು ತಟಸ್ಥ ತಟಸ್ಥ ಎಂದು ಶಾಸಕ ಜಿ ಟಿ ದೇವೇಗೌಡ ಹೇಳಿಕೆ ನೀಡಿದ್ದಾರೆ.