Join The Telegram | Join The WhatsApp |
ಅಹಮದಾಬಾದ್: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಬಿಜೆಪಿ ಪ್ರಚಂಡ ಗೆಲುವು ಸಾಧಿಸಿದ್ದು, ಭೂಪೇಂದ್ರ ಪಟೇಲ್ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದು ಖಚಿತವಾಗಿದೆ. ಗುಜರಾತ್ ನಲ್ಲಿ ಬಿಜೆಪಿ 158 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ 16, ಆಪ್ 5 ಹಾಗೂ ಇತರೆ 3 ಕ್ಷೇತ್ರಗಳಲ್ಲಿ ಮುನ್ನಡೆಯಲ್ಲಿವೆ. ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸುತ್ತಿದ್ದಂತೆ ಮುಖ್ಯಮಂತ್ರಿ ಭುಪೇಂದ್ರ ಪಟೇಲ್ ಪ್ರಮಾಣವಚನ ಸ್ವೀಕಾರಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಅದ್ಧೂರಿ ಸಮಾರಂಭಕ್ಕೆ ಬಿಜೆಪಿ ಸಿದ್ಧತೆ ನಡೆಸಿದೆ. ಡಿಸೆಂಬರ್ 12ರಂದು ಗುಜರಾತ್ ನ ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಭೂಪೆಂದ್ರ ಪಟೇಲ್ 2ನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದು, ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಸೇರಿದಂತೆ ಹಲವು ನಾಯಕರು ಭಾಗಿಯಾಗಲಿದ್ದಾರೆ. ಈ ಕುರಿತು ಗುಜರಾತ್ ಬಿಜೆಪಿ ಅಧ್ಯಕ್ಷ ಸಿ.ಆರ್.ಪಟೇಲ್ ಮಾಹಿತಿ ನೀಡಿದ್ದಾರೆ.
Join The Telegram | Join The WhatsApp |