ವಿಜಯಪುರ: ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಮುತ್ತಿಗೆ ಗ್ರಾಮದಲ್ಲಿ ಶನಿವಾರದಂದು ಶ್ರೀ ಗೌರಿಶಂಕರ ಪ್ರೌಢಶಾಲೆಯ ಆವರಣದಲ್ಲಿ ಹಳೆಯ 2003-2004 ನೇ ಸಾಲಿನ ವಿದ್ಯಾರ್ಥಿಗಳಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಗಳು ರಮೇಶ್ ಎಸ್. ಸೂಳಿಭಾವಿ (ಅಧ್ಯಕ್ಷರು ಶ್ರೀ ಗೌರಿಶಂಕರ ವಿದ್ಯಾವರ್ಧಕ ಸಂಘ, ಮುತ್ತಗಿ) ಹಾಗೂ ಕಾರ್ಯಕ್ರಮದ ಕೇಂದ್ರಬಿಂದುವಾದ ಎಲ್ಲಾ ಗುರು ವೃಂದದವರಿಗೆ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರು ಮತ್ತು ಶಿಕ್ಷಕೀಯರಿಗೆ ಸನ್ಮಾನ ಮಾಡಲಾಯಿತು. ಗುರುವಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಶ್ರೀ ಗೌರಿಶಂಕರ ಪ್ರೌಢಶಾಲೆ ಅಧ್ಯಕ್ಷರು ಪಾಠ ಹೇಳಿ ಜ್ಞಾನಾರ್ಜನೆ ಮಾಡಿಸಿ ಬದುಕಿಗೆ ಬೆಳಕಾದ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಂದಿಗೂ ಮರೆಯಬಾರದು ಎಂದರು.
ನಿವೃತ್ತ ಶಿಕ್ಷಕ&ಶಿಕ್ಷಿಯರು ಕಾರ್ಯಕ್ರಮದಲ್ಲಿ ಮಾತನಾಡಿ 2003-2004ನೇ ಸಾಲಿನ ವ್ಯಾಸಂಗ ಮಾಡಿದ ವಿದ್ಯಾರ್ಥಿಗಳು ಸಹಪಾಠಿ ಸ್ನೇಹಿತರು ಬಳಗದಿಂದ ಗುರುಗಳ ಸೇವೆಯನ್ನು ಸ್ಮರಿಸುವುದು ಮತ್ತು ಅವರಿಗೆ ಪ್ರತ್ಯೇಕವಾಗಿ ಧನ್ಯತೆ ಗೌರವ ಸಮರ್ಪಣೆ ಮಾಡುವುದು ಸಾರ್ಥಕ ಹಾಗೂ 21 ವರ್ಷ ಹಿಂದೆ ನಮ್ಮಿಂದ ಪಾಠ ಕೇಳಿದ ಮಕ್ಕಳು ಇಂದು ಉನ್ನತ ಸ್ಥಾನಗಳಿದ್ದಾರೆ ಅವರೆಲ್ಲರೂ ಒಂದೆಡೆ ಸೇರಿ ನಮ್ಮನ್ನು ನೆನಪಿಸಿಕೊಂಡು ಗುರುವಂದನೆ ಸಲ್ಲಿಸಿರುವುದು ನಮ್ಮ ಬದುಕಿನ ಸುವರ್ಣಗಳಿಗೆ ಎಂದು ಶ್ಲಾಘಿಸಿದರು.
21 ವರ್ಷದ ನಂತರ ಮಿಲನಗೊಂಡ ಸಹಪಾಠಿಗಳು ಹಳೆಯ ದಿನಗಳನ್ನು ಮೆಲುಕು ಹಾಕಿ ಸಂಭ್ರಮಿಸಿದ್ದು ವಿಶೇಷವಾಗಿತ್ತು.
ಈ ಕಾರ್ಯಕ್ರಮದಲ್ಲಿ ಎಲ್ಲ ಗುರು ವೃಂದದವರು, ವಿದ್ಯಾರ್ಥಿಗಳು ಹಾಗೂ ಮುತ್ತತ್ತಿ ಗ್ರಾಮದ ಗುರುಹಿರಿಯರು ಭಾಗವಹಿಸಿದ್ದರು.
ವರದಿ: ಕೃಷ್ಣಾ ಎಚ್. ರಾಠೋಡ