ಚಿಟಗುಪ್ಪ:ತಾಲ್ಲೂಕಿನ ಮುತ್ತಂಗಿ ಗ್ರಾಮದಲ್ಲಿ ಇಂದು ಭಾನುವಾರ ಶ್ರೀ ಗುರುಪಾದೇಶ್ವರರ 44ನೇ ಪುಣ್ಯಸ್ಮರಣೆ ಕಾರ್ಯಕ್ರಮ ಅತ್ಯಂತ ಭಕ್ತಿ ಭಾವದಿಂದ ನಡೆಯಲಿದೆ. ರಾತ್ರಿ ಪಲ್ಲಕ್ಕಿ ಮೆರವಣಿಗೆ,ಗುರುಪಾದೇಶ್ವರ ದೇವಸ್ಥಾನದಲ್ಲಿ ಅಭಿಷೇಕ,ಹಾಗೂ ಬರುವ ಭಕ್ತಾದಿಗಳಿಗೆ ಪ್ರಸಾದ ವ್ಯವಸ್ಥೆ ಮಾಡಲಾಗುತ್ತಿದೆ. ಹೀಗಾಗಿ ಸುತ್ತಮುತ್ತಲಿನ ಎಲ್ಲಾ ಭಕ್ತಾದಿಗಳು ಈ ಪುಣ್ಯಸ್ಮರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಶ್ರೀ ಗುರುಪಾದೇಶ್ವರ ದೇವಸ್ಥಾನ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ:ಸಜೀಶ ಲಂಬುನೋರ್




