ನಿಪ್ಪಾಣಿ : ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ಪಕ್ಕ ಬಿ ಶಂಕರಾನಂದ ನಗರದಲ್ಲಿರುವ ಹಾಲಸಿದ್ದನಾಥ ಸಕ್ಕರೆ ಕಾರ್ಖಾನೆಯಲ್ಲಿ ಬೆಂಕಿ ಅವಘಡ ಬಾರೀ ಹಾನಿ
ಸಕ್ಕರೆ ಕಾರ್ಖಾನೆಯಲ್ಲಿನ ಬಾಯ್ಲರನಲ್ಲಿ ಬೆಂಕಿ ಸಂಭವಿಸಿದ್ದು, ನೋಡ ನೋಡುತ್ತಿದ್ದಂತೆ ಇಡೀ ಫ್ಯಾಕ್ಟರಿ ಬೆಂಕಿಯಲ್ಲಿ ಧಗ ಧಗನೆ ಹೊತ್ತಿ ಉರಿದಿದೆ. 24 ಟನ್ ಬಾಯ್ಲರ್ ಬೆಂಕಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯದಲ್ಲಿ ನಿರತರಾಗಿದ್ದಾರೆ 5 ಕೋಟಿಗೂ ಅಧಿಕ ಮೌಲ್ಯದ ವಸ್ತುಗಳು ಬೆಂಕಿಯಲ್ಲಿ ಸುಟ್ಟು ಭಸ್ಮವಾಗಿವೆ ಎಂದು ತಿಳಿಸಿದರು ಸ್ಥಳಕ್ಕೆ ಪೋಲೀಸ್ ಅಧಿಕಾರಿಗಳು ಬೇಟಿ ನೀಡಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ವರದಿ: ರಾಜು ಮುಂಡೆ ನಿಪ್ಪಾಣಿ.