ಹಾನಗಲ್: ಶುಕ್ರವಾರ ಸಂಜೆ ಹಾನಗಲ್ ತಾಲೂಕಿನ ಅಜಗುಂಡಿಕೊಪ್ಪ ಗ್ರಾಮದಲ್ಲಿ ಚನ್ನಬಸವ್ವ ಮುದ್ದೇಗೌಡರ್ ಎಂಬುವರ ಮನೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದ ಪರಿಣಾಮ ಮನೆ ಸಂಪೂರ್ಣ ಸುಟ್ಟು ಕರಕಲಾಗಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಹಾನಗಲ್ ಪೊಲೀಸರು ತಿಳಿಸಿದ್ದಾರೆ.

ಈ ಘಟನೆಯಿಂದ ಆ ಕುಟುಂಬ ತಮ್ಮ ಜೀವನಕ್ಕೆ ಇಟ್ಟುಕೊಂಡಿದ್ದ ಹಣ ಹಾಗೆ ಒಡವೆಗಳು ಸಂಪೂರ್ಣ ಹಾನಿಯಾಗಿದೆ ಎಂದು ಅಂದಾಜಿಸಲಾಗಿದ್ದು. ಸ್ಥಳಕ್ಕೆ ಹಾನಗಲ್ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.
ವರದಿ: ರಮೇಶ್ ತಾಳಿಕೋಟಿ




