ಮಂಡ್ಯ: ಚನ್ನಪಟ್ಟಣ ಚುನಾವಣೆ ಪ್ರಚಾರದಲ್ಲಿ ಕುಮಾರಸ್ವಾಮಿ ಮತ್ತು ನಿಖಿಲ್ ಕುಮಾರಸ್ವಾಮಿ ಕಣ್ಣೀರಿನ ಬಗ್ಗೆ ಲಘುವಾಗಿ ಮಾತನಾಡಿರುವ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿರುವ ಮಾಜಿ ಪ್ರಧಾನಿ ದೇವೇಗೌಡರು; ನಮ್ಮ ವಂಶ ಬಡತನದಿಂದ ಕಷ್ಟಸುಖ ಅರಿತು ಮೇಲೆ ನಮ್ಮ ವಂಶಕ್ಕೆ ಈ ಕಣ್ಣೀರು ಬಳುವಳಿಯಾಗಿ ಬಂದಿದೆ ಎಂದರು.
ಪಾಂಡವಪುರದ ಚಿನಕುರುಳಿ ಗ್ರಾಮದಲ್ಲಿ ಮಾಜಿ ಪ್ರಧಾನಿಗಳು ಮಾಧ್ಯಮಗಳ ಜತೆ ಮಾತನಾಡಿದರು. ಕಣ್ಣೀರ ಬಗ್ಗೆ ವ್ಯಂಗ್ಯವಾಡ್ತಿರೋ ಕೈ ನಾಯಕರ ವಿರುದ್ದ ಹರಿಹಾಯ್ದ ದೇವೇಗೌಡರು; ತಮ್ಮ ಬದುಕಿನ ಹಸಿವು, ಕಣ್ಣೀರನ್ನು ಅವರು ನೆನಪು ಮಾಡಿಕೊಂಡರು.
ನಮಗೆ ರೈತರ, ಬಡ ಜನರ ಕಷ್ಟ ಸುಖಗಳ ಅರಿವಿದೆ. ಅವರ ಕಷ್ಟಕ್ಕೆ ಸ್ಪಂದಿಸುವ ಹೃದಯ ಯಾರಿಗಿರುತ್ತೋ ಅವರಿಗೆ ಮಾತೃ ಹೃದಯ ಇರುತ್ತೆ. ಕಣ್ಣೀರಿನ ಬಗ್ಗೆ ವ್ಯಂಗ್ಯ ಮಾಡುವ ಜನರಿಗೆ ನಾನು ಇನ್ನೇನು ಹೇಳಲು ಬಯಸುವುದಿಲ್ಲ ಎಂದು ಅವರು ಹೇಳಿದರು.