ಚನಾವಣೆ ಸಿದ್ದತಾ ಸಭೆ ಹೆಚ್ ಡಿ ದೇವೇಗೌಡರು ನಿಖಿಲ್ ಕುಮಾರ್ ಸ್ವಾಮಿ ಭಾಗಿ
‘ವಾರ್ಡ, ಮತಗಟ್ಟೆ ಮಟ್ಟದಲ್ಲಿ ಪಕ್ಷ ಸಂಘಟಿಸಲು ಸೂಚನೆ’
ಬೆಂಗಳೂರು : ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆಯಲ್ಲಿ ಮೈತ್ರಿಗೆ ಧಕ್ಕೆಯಾಗದಂತೆ ಕಾರ್ಯಕರ್ತರು, ಮುಖಂಡರು ಕೆಲಸ ಮಾಡಬೇಕು ಹೆಚ್ಚು ವಾರ್ಡಗಳಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಶ್ರಮವಹಿಸಿ ಬೇಕು ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು.
ಜೆಡಿಎಸ್ ಪಕ್ಷದ ಕಚೇರಿಯಲ್ಲಿ ರಾಷ್ಟ್ರೀಯ ಅಧ್ಯಕ್ಷ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಉಪಸ್ಥಿತಿಯಲ್ಲಿ ನಡೆದ ಗ್ರೇಟರ್ ಬೆಂಗಳೂರು ಚುನಾವಣೆ ಕುರಿತು ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು, ಸ್ಥಳೀಯವಾಗಿ ಸಮಸ್ಯೆ ಗೊಂದಲಗಳು ಏನಾದರೂ ಇದ್ದರೆ ಬಹಿರಂಗ ಹೇಳಿಕೆಗಳನ್ನು ಕೊಡಬೇಡಿ ಅಂತಹ ವಿಷಯಗಳನ್ನು ನಮ್ಮ ಗಮನಕ್ಕೆ ತನ್ನಿ ಬೀದಿಯಲ್ಲಿ ಹೇಳಿಕೆಗಳನ್ನು ನೀಡುವುದು ಬೇಡ ಎಂದು ಸಚಿವರು ತಾಕೀತು ಮಾಡಿದರು. ಮಹಾರಾಷ್ಟ್ರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎನ್ ಡಿಎ ಮೈತ್ರಿಕೂಟ ಉತ್ತಮ ಸಾಧನೆ ಮಾಡಿದೆ ಬೆಂಗಳೂರಿನಲ್ಲಿ ಕೂಡ ಇದೇ ಫಲಿತಾಂಶ ಪುನರಾವರ್ತನೆ ಆಗಲಿದೆ, ಈ ನಿಟ್ಟಿನಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು, ಮುಖಂಡರು ಒಟ್ಟಾಗಿ ದುಡಿಮೆ ಮಾಡ ಬೇಕು ಎಂದು ಕೇಂದ್ರ ಸಚಿವರು ಕೆರೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ದುರಾಡಳಿತದಿಂದ ಜನರು ರೋಸಿ ಹೋಗಿದ್ದಾರೆ, ಬೆಂಗಳೂರಿನಲ್ಲಿ ಮೂಲ ಸೌಕರ್ಯವನ್ನು ಸರ್ವನಾಶ ಮಾಡಿದ್ದಾರೆ, ಕಾಲಿಟ್ಟ ಕಡೆಯಲ್ಲೆಲ್ಲಾ ಗುಂಡಿಗಳು ಕಾಣುತ್ತವೆ, ತೆರಿಗೆ, ಬೆಲೆ ಹೇರಿಕೆಯಿಂದ ಲೂಟಿ ಮಾಡುತ್ತಿದ್ದಾರೆ, ಭ್ರಷ್ಟಾಚಾರ ಮಿತಿ ಮೀರಿದೆ, ಇದಕ್ಕಾಗಿ ತಕ್ಕ ಪಾಠ ಕಲಿಸಲು ಜನರು ತುದಿಗಾಲಲ್ಲಿ ನಿಂತಿದ್ದಾರೆ ಹೀಗಾಗಿ ನಾವು ಜನರಿಗೆ ಮನವರಿಕೆ ಮಾಡಿ ಕೊಡಬೇಕು ಎಂದು ಕುಮಾರಸ್ವಾಮಿ ಅವರು ಸಲಹೆ ನೀಡಿದರು.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರು ಕೂಡ ಈ ಸಂದರ್ಭದಲ್ಲಿ ಮಾತನಾಡಿದರು.
ಕೋರ್ ಕಮಿಟಿ ಅಧ್ಯಕ್ಷ ಎಂ.ಕೃಷ್ಣಾರೆಡ್ಡಿ, ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು,ಸಂಸದ ಮಲ್ಲೇಶ್ ಬಾಬು ಸೇರಿದಂತೆ ಪಕ್ಷದ ಬೆಂಗಳೂರು ನಗರದ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮುಖಂಡರು, ಮಾಜಿ ಶಾಸಕರು ಉಪಸ್ಥಿತರಿದ್ದರು.
ವರದಿ : ಅಯ್ಯಣ್ಣ ಮಾಸ್ಟರ್




