Ad imageAd image

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಎಚ್. ಡಿ ರೇವಣ್ಣ

Bharath Vaibhav
ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣ : ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ ಎಚ್. ಡಿ ರೇವಣ್ಣ
prajwal revanna
WhatsApp Group Join Now
Telegram Group Join Now

ಬೆಂಗಳೂರು: ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ಪ್ರಮುಖ ಆರೋಪಿ ಮಾಜಿ ಸಚಿವ, ಶಾಸಕ ಹೆಚ್.ಡಿ.ರೇವಣ್ಣಗೆ ಬಂಧನ ಭೀತಿ ಎದುರಾಗಿದ್ದು, ನಿರೀಕ್ಷಣಾ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದಾರೆ.

ಮಹಿಳೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್.ಡಿ.ರೇವಣ್ಣ ವಿರುದ್ಧ ಹೊಳೆನರಸಿಪುರ ಠಾಣೆಯಲ್ಲಿ ದೂರು ದಾಖಲಾಗಿದೆ.

ಪ್ರಕರಣ ಸಂಬಂಧ ಎಸ್ ಐಟಿ ವಿಚಾರಣೆ ಚುರುಕುಗೊಳಿಸಿದ್ದು, ಹೆಚ್.ಡಿ.ರೇವಣ್ಣಗೆ ವಿಚಾರಣೆಗೆ ಹಾಜರಾಗುವಂತೆ ನೋಟೀಸ್ ನೀಡಲಾಗಿದೆ.

ಆದರೆ ಹೆಚ್.ಡಿ.ರೇವಣ್ಣ ಈವರೆಗೂ ಎಸ್ ಐಟಿ ಮುಂದೆ ವಿಚಾರಣೆಗೆ ಹಾಜರಾಗಿಲ್ಲ. ಇಂದು ವಿಚಾರಣೆಗೆ ಹಾಜರಾಗದಿದ್ದಲ್ಲಿ ಅವರನ್ನು ಬಂಧಿಸುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದರು.

ಬಂಧನ ಭೀತಿಯಲ್ಲಿರುವ ಹೆಚ್.ಡಿ.ರೇವಣ್ಣ ಇದೀಗ ಬೆಂಗಳೂರಿನ ಸೆಷನ್ಸ್ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

WhatsApp Group Join Now
Telegram Group Join Now
Share This Article
error: Content is protected !!