Ad imageAd image

ಸಲಿಂಗ ಕಾಮ : ಹೆಚ್.ಡಿ. ರೇವಣ್ಣ ಪುತ್ರ ಸೂರಜ್‌ ರೇವಣ್ಣ ಅರೆಸ್ಟ್ 

Bharath Vaibhav
ಸಲಿಂಗ ಕಾಮ : ಹೆಚ್.ಡಿ. ರೇವಣ್ಣ ಪುತ್ರ ಸೂರಜ್‌ ರೇವಣ್ಣ ಅರೆಸ್ಟ್ 
WhatsApp Group Join Now
Telegram Group Join Now

ಹಾಸನ : ಲೈಂಗಿಕ ದೌರ್ಜನ್ಯ ಆರೋಪ ಸಂಬಂಧ ಹಾಸನ ಸೆನ್‌ ಪೊಲೀಸ್‌ ಠಾಣೆಯ ಪೊಲೀಸರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಪುತ್ರ ಎಂಎಲ್‌ ಸಿ ಸೂರಜ್‌ ರೇವಣ್ಣರನ್ನು ಅರೆಸ್ಟ್‌ ಮಾಡಲಾಗಿದೆ.

ನಿನ್ನೆ ಹಾಸನದ ಸೆನ್‌ ಪೊಲೀಸ್‌ ಠಾಣೆಗೆ ಕರೆತಂದಿದ್ದ ಪೊಲೀಸರು ಇಂದು ಮುಂಜಾನೆ ನಾಲ್ಕು ಗಂಟೆಯವರೆಗೂ ಸುಧೀರ್ಘ ವಿಚಾರಣೆ ನಡೆಸಿದ್ದಾರೆ.

ಸೂರಜ್‌ ರೇವಣ್ಣ ಆಪ್ತ ಶಿವಕುಮಾರ್‌ ನೀಡಿದ್ದ ದೂರಿನ್ವಯ ತಾಂತ್ರಿಕ ಸಾಕ್ಷ್ಯ ಸಂಗ್ರಹಕ್ಕೆ ಪೊಲೀಸರು ಮುಂದಾಗಿದ್ದಾರೆ. ಹೀಗಾಗಿ ಯಾವುದೇ ಕ್ಷಣದಲ್ಲೂ ಸೂರಜ್‌ ರೇವಣ್ಣ ಬಂಧನವಾಗುವ ಸಾಧ್ಯತೆ ಇದೆ.

ಸಂತ್ರಸ್ತ ಯುವಕ ಹಣಕ್ಕಾಗಿ ಬ್ಲ್ಯಾಕ್‌ವೆುàಲ್‌ ಮಾಡಿದ ಸಂಬಂಧದ ಆಡಿಯೋ ಗಳನ್ನು ಈಗಾಗಲೇ ವಶಕ್ಕೆ ಪಡೆದಿರುವ ಪೊಲೀಸರು ಇನ್ನಷ್ಟು ಆಡಿಯೋ ಸೇರಿ ಹಲವು ದಾಖಲೆಗಳನ್ನು ಪಡೆಯಲು ತನಿಖೆ ಮುಂದುವರೆಸಿದ್ದಾರೆ.

ಸೂರಜ್‌ ರೇವಣ್ಣ ಅವರು ಚನ್ನರಾಯಪಟ್ಟಣ ತಾಲೂಕು ಗನ್ನಿಕಡ ಬಳಿ ಇರುವ ತೋಟದ ಮನೆಗೆ ಜೂ. 16ರಂದು ನನ್ನನ್ನು ಕರೆಸಿಕೊಂಡು ನನ್ನ ಮೇಲೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ದೌರ್ಜನ್ಯ ಎಸಗಿದ್ದಾರೆ ಎಂದು ಅರಕಲಗೂಡು ತಾಲೂಕಿನ ಜೆಡಿಎಸ್‌ ಕಾರ್ಯಕರ್ತನೊಬ್ಬ ಹೊಳೆನರಸೀಪುರ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾನೆ.

 

 

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!