Ad imageAd image

ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ

Bharath Vaibhav
ಇಡ್ಲಿ ಬಳಿಕ ಬಟಾಣಿಯಲ್ಲೂ ಆರೋಗ್ಯಕ್ಕೆ ಹಾನಿಕಾರಕ ಅಂಶ ಪತ್ತೆ: ಆರೋಗ್ಯ ಇಲಾಖೆ
WhatsApp Group Join Now
Telegram Group Join Now

ಹಸಿರು ಬಟಾಣಿಗಳಿಗೆ ಕೃತಕ ಬಣ್ಣದ ಬಳಕೆಯಿಂದಾಗಿ ಅವು ಅಸುರಕ್ಷಿತವಾಗಿರುವುದನ್ನು ಬೆಂಗಳೂರಿನ ಆಹಾರ ಇಲಾಖೆ ಪತ್ತೆಹಚ್ಚಿದೆ. 36 ಮಾದರಿಗಳ ಪರೀಕ್ಷೆಯಲ್ಲಿ 28 ಕ್ಕೂ ಹೆಚ್ಚು ಮಾದರಿಗಳು ಅಸುರಕ್ಷಿತ ಎಂದು ಕಂಡುಬಂದಿದೆ. ಇದರಿಂದಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವ ಸಾಧ್ಯತೆಯಿದೆ. ಇದರ ಜೊತೆಗೆ, ಇಲಾಖೆ ಹೋಟೆಲ್‌ಗಳಲ್ಲಿ ಇಡ್ಲಿ ತಯಾರಿಕೆಯಲ್ಲಿ ಪ್ಲಾಸ್ಟಿಕ್ ಬಳಕೆಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳುತ್ತಿದೆ.

ಬೆಂಗಳೂರು ಆಹಾರಪ್ರಿಯರಿಗೆ ಆಹಾರ ಇಲಾಖೆ (Food Department) ಮತ್ತೊಂದು ಶಾಕಿಂಗ್ ಸುದ್ದಿ ನೀಡಿದೆ. ಇಡ್ಲಿ ಬಳಿಕ ಹಸಿರು ಬಟಾಣಿ (Peas) ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗದಿಂದ ದೃಢಪಟ್ಟಿದೆ. ಬೆಂಗಳೂರಿನ ವಿವಿಧ ಭಾಗದಲ್ಲಿನ ಸುಮಾರು 36 ಮಾದರಿಯ ಹಸಿರು ಬಟಾಣಿ ಮಾದರಿಗಳನ್ನು ಪಡೆದಿದ್ದ ಆಹಾರ ಇಲಾಖೆ ಅವುಗಳನ್ನು ಪ್ರಯೋಗಾಲಯದಲ್ಲಿ ಪರೀಕ್ಷೆಗೆ ಒಳಪಡಿಸಿತ್ತು. ಇದೀಗ ಪ್ರಯೋಗಾಲಯ ವರದಿ ಬಂದಿದ್ದು, 28 ಕ್ಕೂ ಹೆಚ್ಚು ಹಸಿರು ಬಟಾಣಿ ಮಾದರಿಗಳು ಅಸುರಕ್ಷಿತ ಎಂಬ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.

ಬಟಾಣಿ ಆರೋಗ್ಯಕ್ಕೆ ಮಾರಕ ಹೇಗೆ?
ಬಟಾಣಿ ಹಸಿರಾಗಿ ಕಾಣಲು ಕೃತಕ ಬಣ್ಣ ಬಳಸಲಾಗುತ್ತಿದೆ ಎಂಬ ಅಂಶ ವರದಿಯಲ್ಲಿ ಉಲ್ಲೇಖವಾಗಿದೆ. ಕಲರ್ ಬಳಕೆಯಿಂದ ಬಟಾಣಿ ಸಾಮಾನ್ಯಕ್ಕಿಂತ ಹೆಚ್ಚು ಹಸಿರಾಗಿ ಕಾಣುತ್ತಿದ್ದು, ಜನರನ್ನು ಆಕರ್ಶಿಸುತ್ತಿದೆ. ಬಟಾಣಿಯಲ್ಲಿ ಬಣ್ಣ ಬಳಕೆ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ಪರಿಣಾಮ ಬೀರಲಿದೆ. ಬಟಾಣಿಯ ಬಣ್ಣ ಕಿಡ್ನಿಯ ಮೇಲೆ ಪರಿಣಾಮ ಬೀರಲಿದೆ ಎಂದು ವರದಿಯಲ್ಲಿ ಬಹಿರಂಗಗೊಂಡಿದೆ. ಈ ಹಿನ್ನೆಲೆಯಲ್ಲಿ ಅಲರ್ಟ್ ಆದ ಆರೋಗ್ಯ ಹಾಗೂ ಆಹಾರ ಸುರಕ್ಷತಾ ಇಲಾಖೆ ಕೃತಕ ಬಣ್ಣ ಬಳಸಿ ಬಟಾಣಿ ಮಾರಟ ಮಾಡುವ ವ್ಯಾಪರಿಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಮುಂದಾಗಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!