ಡಾರ್ಜಿಲಿಂಗ್ ನ ಮಿರಿಕ್ ಮತ್ತು ಸುಖಿಯಾ ಪೋಖಾರಿಯಲ್ಲಿ ಭೂಕುಸಿತದಿಂದ 14 ಜನರು ಸಾವನ್ನಪ್ಪಿದ್ದಾರೆ.
ಡಾರ್ಜಿಲಿಂಗ್ ಜಿಲ್ಲಾ ಪೊಲೀಸರ ರಕ್ಷಣಾ ಕಾರ್ಯಾಚರಣೆ ಮುಂದುವರೆದಿರುವುದರಿಂದ ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭಾರಿ ಮಳೆಯಿಂದ ಉಂಟಾದ ಭೂಕುಸಿತದಿಂದಾಗಿ ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂ ನಡುವಿನ ರಸ್ತೆ ಸಂಪರ್ಕ ಕಡಿತಗೊಂಡಿದೆ.ಡಾರ್ಜಿಲಿಂಗ್ ಮತ್ತು ಸಿಲಿಗುರಿ ನಡುವಿನ ಮುಖ್ಯ ರಸ್ತೆಯನ್ನು ನಿರ್ಬಂಧಿಸಲಾಗಿದೆ.
ಭಾರೀ ಮಳೆಯಿಂದಾಗಿ ಜಲಪೈಗುರಿ, ಸಿಲಿಗುರಿ ಮತ್ತು ಕೂಚ್ ಬೆಹಾರ್ ಮೇಲೆ ಪರಿಣಾಮ ಬೀರಿದ್ದು, ಹಲವಾರು ಪ್ರದೇಶಗಳಲ್ಲಿ ಜಲಾವೃತವಾಗಿದೆ.




