Ad imageAd image

ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಆಲಮಟ್ಟಿ ಡ್ಯಾಂನ ಎಲ್ಲಾ 26 ಗೇಟ್‌ ಓಪನ್‌, 1 ಲಕ್ಷ ಕ್ಯೂಸೆಕ್‌ ನೀರು ಹೊರಕ್ಕೆ

Bharath Vaibhav
ಮಹಾರಾಷ್ಟ್ರದಲ್ಲಿ ಭಾರೀ ಮಳೆ, ಆಲಮಟ್ಟಿ ಡ್ಯಾಂನ ಎಲ್ಲಾ 26 ಗೇಟ್‌ ಓಪನ್‌, 1 ಲಕ್ಷ ಕ್ಯೂಸೆಕ್‌ ನೀರು ಹೊರಕ್ಕೆ
WhatsApp Group Join Now
Telegram Group Join Now

ನಿಡಗುಂದಿ: ಮಹಾರಾಷ್ಟ್ರದ ಕೃಷ್ಣಾ ಅಚ್ಚುಕಟ್ಟು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಇದರಿಂದ ಆಲಮಟ್ಟಿ ಡ್ಯಾಂಗೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ. ಇದರಿಂದ ಜಲಾಶಯ ಶೇಕಡಾ 70ರಷ್ಟು ಭರ್ತಿಯಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಜಲಾಶಯದಿಂದ 1.10 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿದು ಬಿಡಲಾಗುತ್ತಿದೆ. ಜಲಾಶಯದ ಬಲ ಬದಿಯಲ್ಲಿರುವ ವಿದ್ಯುದಾಗಾರದ ಮೂಲಕ 45 ಸಾವಿರ ಕ್ಯುಸೆಕ್‌ ಹಾಗೂ ಜಲಾಶಯ ಸೇರಿ 1.10 ಲಕ್ಷ ಕ್ಯೂಸೆಕ್ ನೀರನ್ನು ನದಿಗೆ ಬಿಡಲಾಗುತ್ತಿದೆ.

ರಾಜ್ಯದ ಬೆಳಗಾವಿ ಸೇರಿದಂತೆ ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಆಲಮಟ್ಟಿ ಜಲಾಶಯಕ್ಕೆ ಅಪಾರ ಪ್ರಮಾಣದಲ್ಲಿ ನೀರು ಹರಿದು ಬರುತ್ತಿದೆ.

ಗರಿಷ್ಠ 519.60 ಮೀಟರ್‌ ಎತ್ತರದಲ್ಲಿ 123.081 ಟಿಎಂಸಿ ನೀರು ಸಂಗ್ರಹದ ಸಾಮರ್ಥ್ಯದ ಜಲಾಶಯದಲ್ಲಿ ರವಿವಾರ 517.10 ಮೀಟರ್‌ ಎತ್ತರದಲ್ಲಿ 85.697 ಟಿಎಂಸಿ ನೀರು ಸಂಗ್ರಹ. ಒಳ ಹರಿವಿನ ಪ್ರಮಾಣ 1,14,327 ಕ್ಯುಸೆಕ್‌ ಇದ್ದು, 1.10 ಲಕ್ಷ ಕ್ಯುಸೆಕ್‌ ನೀರನ್ನು ನದಿ ಪಾತ್ರಕ್ಕೆ ಹರಿಬಿಡಲಾಗುತ್ತಿದೆ.

ವರದಿ :ಅಲಿ ಮಕಾನದಾರ

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!