Ad imageAd image

ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ 

Bharath Vaibhav
ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ 
WhatsApp Group Join Now
Telegram Group Join Now

ಬೆಂಗಳೂರು : ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ಥಗೊಂಡಿದೆ.

ಬೆಂಗಳೂರಿನ ಹಲವು ಕಡೆ ಧಾರಾಕಾರ ಮಳೆಯಾಗಿದ್ದು, ಹಲವೆಡೆ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಹಲವೆಡೆ ರಸ್ತೆಗಳು ಜಲಾವೃತಗೊಂಡಿವೆ.

ಮೆಜೆಸ್ಟಿಕ್, ಮೈಸೂರು ಬ್ಯಾಂಕ್ ಸರ್ಕಲ್, ವಿಧಾನಸೌಧ, ಶಾಂತಿನಗರ, ಜಯನಗರ, ತ್ಯಾಗರಾಜನಗರ, ಶ್ರೀನಗರ, ಕೆಆರ್ ಮಾರುಕಟ್ಟೆ, ಟೌನ್ ಹಾಲ್, ಕಾರ್ಪೊರೇಷನ್ ಸರ್ಕಲ್, ಮೈಸೂರು ರಸ್ತೆ, ವಿಜಯನಗರ, ಮಾಗಡಿ ರಸ್ತೆ, ರಾಜಾಜಿನಗರ ಹಾಗೂ ಮಲ್ಲೇಶ್ವರಂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.

ಜಾಲಹಳ್ಳಿ, ಹೆಬ್ಬಾಳ, ಯಲಹಂಕ, ಬನ್ನೇರುಘಟ್ಟ ರಸ್ತೆ, ಕೆಆರ್ ಪುರಂ, ಟಿನ್ ಫ್ಯಾಕ್ಟರಿ, ಮಹದೇವಪುರ, ಬೆಳ್ಳಂದೂರು, ಮಾರತಹಳ್ಳಿ, ಕಾಡುಬೀಸನಹಳ್ಳಿ, ಸಿಲ್ಕ್ ಬೋರ್ಡ್, ಬಿಟಿಎಂ ಲೇಔಟ್, ಜೆಪಿ ನಗರ, ಬನಶಂಕರಿ, ಕತ್ರಿಗುಪ್ಪೆ, ಪದ್ಮನಾಭನಗರ, ನಾಯಂಡಹಳ್ಳಿ, ಕೆಂಗೇರಿ, ನಾಗರಬಾವಿ, ಆರ್.ಆರ್. ನಗರ, ಕೋಣನಕುಂಟೆ, ತಲಘಟ್ಟಪುರ ಸೇರಿದಂತೆ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುತ್ತಿದೆ.

ಬೆಂಗಳೂರು ಸೇರಿದಂತೆ ರಾಮನಗರ, ಮಂಂಡ್ಯ, ಮೈಸೂರು, ಶಿವಮೊಗ್ಗ, ದಾವಣಗೆರೆ ಚಿತ್ರದುರ್ಗ, ದಾವಣಗೆರೆ, ಹಾವೇರಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ರಾತ್ರಿಯಿಡಿ ಮಳೆಯಾಗುತ್ತಿದ್ದು, ಹಲವಡೆ ರಸ್ತೆಗಳು ಜಲಾವೃತಗೊಂಡಿವೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!