ಸೇಡಂ: ಬೇಸಿಗೆಯ ಹಿನ್ನೆಲೆಯಲ್ಲಿ ಗ್ರಾಮೀಣ ಭಾಗಗಳಲ್ಲಿ ಎದುರಾಗಬಹುದಾದ ಕುಡಿಯುವ ನೀರಿನ ಸಮಸ್ಯೆಯನ್ನು ತ್ವರಿತವಾಗಿ ಪರಿಹರಿಸಲು ತಾಲ್ಲೂಕು ಪಂಚಾಯಿತಿ ವತಿಯಿಂದ ವಿಶೇಷ ಸಹಾಯವಾಣಿ ಕೇಂದ್ರ ಸ್ಥಾಪಿಸಲಾಗಿದೆ ಎಂದು ತಾಲೂಕಾ ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಚನ್ನಪ್ಪ ರಾಯಣ್ಣನವರ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು ತಾಲೂಕಿನ ಯಾವುದೇ ಗ್ರಾಮಗಳಲ್ಲಿ ಕುಡಿಯುವ ನೀರಿನ ಅಭಾವ ಕಂಡುಬಂದಲ್ಲಿ ಅಥವಾ ಪೂರೈಕೆಯಲ್ಲಿ ವ್ಯತ್ಯಯ ಉಂಟಾದಲ್ಲಿ ಸಾರ್ವಜನಿಕರು ತಕ್ಷಣ ಅಬ್ಬಾಸ್ ಅಲಿ 9449325323,ವೀರಪ್ಪ 7406013279, ಸುನೀಲಕುಮಾರ 9535799724, ಸಹಾಯವಾಣಿಗೆ ಕರೆ ಮಾಡಿ ಪರಿಹಾರ ಒದಗಿಸುವಂತಹ ವ್ಯವಸ್ಥೆ ಮಾಡಲಾಗಿದೆ ಎಂದು ತಿಳಿಸಿದ್ದಾರೆ.
ವರದಿ : ವೆಂಕಟಪ್ಪ ಕೆ ಸುಗ್ಗಾಲ್.




