ಪಾವಗಡ :ಪಟ್ಟಣದ ತಾಲ್ಲೂಕು ದಂಡಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಬಳಿ ಸಾಯಂಕಾಲ ಕಂದಾಯ ಇಲಾಖೆ ನೌಕರರ ಸಂಘದ ಸಭೆ ಜಿಲ್ಲಾಧ್ಯಕ್ಷ ನರಸಿಂಹರಾಜು ಅವರ ಅಧ್ಯಕ್ಷತೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.
ಈ ಸಭೆಯಲ್ಲಿ ಪಾಲ್ಗೊಂಡಿದ್ದ ಸಂಘದ ಜಿಲ್ಲಾಧ್ಯಕ್ಷರಾದ ನರಸಿಂಹರಾಜು ಅವರು, ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ಎದುರಾಗಿರುವ ವಿವಿಧ ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತಂದು ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಭರವಸೆ ನೀಡಿದರು.
ಜಿಲ್ಲಾ ಪದಾಧಿಕಾರಿಗಳ ತಂಡವು ಪಾವಗಡ ತಾಲ್ಲೂಕಿಗೆ ಭೇಟಿ ನೀಡಿದ ಸಂದರ್ಭದಲ್ಲಿ, ಸ್ಥಳೀಯ ಕಂದಾಯ ನೌಕರರು ಹಾಗೂ ಗ್ರಾಮ ಸಹಾಯಕರೊಂದಿಗೆ ಸಮಾಲೋಚನೆ ನಡೆಸಲಾಯಿತು.

ಈ ವೇಳೆ ನೌಕರರು ತಾವು ಎದುರಿಸುತ್ತಿರುವ ಪ್ರಮುಖ ಸವಾಲುಗಳ ಬಗ್ಗೆ ಜಿಲ್ಲಾಧ್ಯಕ್ಷರ ಮುಂದೆ ಸುದೀರ್ಘವಾಗಿ ಚರ್ಚಿಸಿದರು.
ಪಾವಗಡ ತಾಲ್ಲೂಕಿನ ಕಂದಾಯ ಇಲಾಖೆಯಲ್ಲಿ ನೌಕರರು ಅನುಭವಿಸುತ್ತಿರುವ ಅತಿಯಾದ ಕೆಲಸದ ಒತ್ತಡ ಮತ್ತು ಇಲಾಖೆಯ ಆಂತರಿಕ ಸಮಸ್ಯೆಗಳ ಬಗ್ಗೆ ಪದಾಧಿಕಾರಿಗಳು ಸಮಗ್ರ ಮಾಹಿತಿಯನ್ನು ಸಂಗ್ರಹಿಸಿದರು.
ನೌಕರರ ನ್ಯಾಯಬದ್ಧ ಬೇಡಿಕೆಗಳನ್ನು ಹಾಗೂ ತಾಂತ್ರಿಕ ಸಮಸ್ಯೆಗಳನ್ನು ಜಿಲ್ಲಾಧಿಕಾರಿಗಳ ಮತ್ತು ಸಂಬಂಧಪಟ್ಟ ಸಚಿವರ ಗಮನಕ್ಕೆ ತಂದು ಶೀಘ್ರವಾಗಿ ಪರಿಹರಿಸುವ ಭರವಸೆಯನ್ನು ಈ ಸಂದರ್ಭದಲ್ಲಿ ನೀಡಲಾಯಿತು.
ನೌಕರರು ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಹಾಗೂ ಸಂಘಟನೆಯನ್ನು ಮತ್ತಷ್ಟು ಶಕ್ತಿಯುತಗೊಳಿಸುವ ಮೂಲಕ ತಮ್ಮ ಹಕ್ಕುಗಳನ್ನು ಪಡೆಯಬೇಕು ಎಂದು ಜಿಲ್ಲಾಧ್ಯಕ್ಷರು ಕರೆ ನೀಡಿದರು.
ಕಂದಾಯ ಇಲಾಖೆಯ ಮೂಲ ಹಂತದ ಕೆಲಸಗಾರರಾದ ಗ್ರಾಮ ಸಹಾಯಕರ ಸಂಘದ ಸದಸ್ಯರ ಸಮಸ್ಯೆಗಳ ಬಗ್ಗೆಯೂ ಸಭೆಯಲ್ಲಿ ವಿಶೇಷ ಗಮನಹರಿಸಲಾಯಿತು.
ಈ ವೇಳೆಯಲ್ಲಿ ಈ ಸಭೆಗೆ ಭಾಗವಹಿಸಿದವರು. ಗ್ರಾಮ ಆಡಳಿತ ಅಧಿಕಾರಿ ಜಿಲ್ಲಾ ಅಧ್ಯಕ್ಷ ದೇವರಾಜು. ರಾಜ್ಯ ಪ್ರಧಾನ ಜಂಟಿ ಕಾರ್ಯದರ್ಶಿ ರಂಜಿತ್ ಕುಮಾರ್. ಕಂದಾಯ ಇಲಾಖೆಯ ನೌಕರ ಸಂಘಕ್ಕೆ ತಾಲೂಕ್ ಘಟಕ ಅಧ್ಯಕ್ಷ ಕಿರಣ್ ಕುಮಾರ್.ಕಂದಾಯ ಇಲಾಖೆ ನೌಕರರ ಸಂಘಕ್ಕೆ ನಿರ್ದೇಶಕರಗಳರಾದ. ಶಿರಸ್ತೆದಾರ್ ಚಂದ್ರಶೇಖರ್. ಆರ್ ಐ ರಾಜಗೋಪಾಲ್. ರಾಜೇಶ್. ಸಂಘದ ಪದಾಧಿಕಾರಿಗಳು, ಮತ್ತು ಗ್ರಾಮ ಸಹಾಯಕರ ಸಂಘದ ಸದಸ್ಯರು ಹಾಗೂ ಕಂದಾಯ ಇಲಾಖೆಯ ಸಿಬ್ಬಂದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿದ್ದರು .
ವರದಿ:ಶಿವಾನಂದ



