ರಾಯಚೂರು: ಕೆಮಿಕಲ್ ತುಂಬಿದ ಲಾರಿ ಪಲ್ಟಿಯಾಗಿದ್ದರಿಂದ ರಾಯಚೂರಿನಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ರಾಯಚೂರಿನ ಗುಂಜಳ್ಳಿ ಬಳಿ ಚಾಲಕನ ನಿಯಂತ್ರಣ ತಪ್ಪಿ ಮಗುಚಿ ಬಿದ್ದಿದೆ.
ಲಾರಿಯಿಂದ ಮೀಥೇನ್ ಸೋರಿಕೆಯಾಗಿದ್ದು, ಜನರಿಗೆ ಆರೋಗ್ಯ ಸಮಸ್ಯೆ ಎದುರಾಗುವ ಭೀತಿ ಉಂಟಾಗಿದೆ.ಹೀಗಾಗಿ ರಾಯಚೂರು- ಮಂತ್ರಾಲಯ ಹೆದ್ದಾರಿ ಬಂದ್ ಮಾಡಲಾಗಿದೆ.
ಲಾರಿ ಮಗುಚಿ ಬಿದ್ದ ಪರಿಣಾಮ ಮೀಥೇನ್ ಸೋರಿಕೆಯಾಗಿದ್ದು ಸ್ಥಳೀಯರಲ್ಲಿ ಆತಂಕ ಮೂಡಿದೆ. ಇನ್ನು ಸಾರ್ವಜನಿಕರು ಲಾರಿ ಬಿದ್ದ ಸ್ಥಳದಿಂದ ದೂರ ಇರುವಂತೆ ಸೂಚನೆ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕಗಳ ಸಿಬ್ಬಂದಿ ದೌಡಾಯಿಸಿದ್ದು ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪ್ರಯತ್ನಿಸುತ್ತಿದ್ದಾರೆ.