ನವದೆಹಲಿ : ರಾಜ್ಯ ಬಿಜೆಪಿ ಪಾಳಯದ ಅಸಮಾಧಾನ ವ್ಯಾಪಕವಾಗುತ್ತಿದ್ದಂತೆಯೇ ಯತ್ನಾಳ್ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷರು ಹೈಕಮಾಂಡ್ ಗೆ ವರದಿ ನೀಡಿದ್ದ ಬೆನ್ನಲ್ಲೇ, ಕೇಂದ್ರ ಶಿಸ್ತು ಸಮಿತಿಯಿಂದ ಯತ್ನಾಳ್ ಗೆ ನೋಟಿಸ್ ನೀಡಲಾಗಿತ್ತು. ಹೀಗಾಗಿ ಇಂದು ಯತ್ನಾಳ್ ಶಿಸ್ತು ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು.
ಇಂದು ನವದೆಹಲಿಯಲ್ಲಿ ಕೇಂದ್ರ ಶಿಸ್ತು ಸಮಿತಿಯ ಅಧ್ಯಕ್ಷ ಓಂ ಪಾಟಕ್ ಅವರನ್ನು ಭೇಟಿಯಾದ ಯತ್ನಾಳ್ ವರಿಷ್ಠರ ಪ್ರಶ್ನೆಗಳಿಗೆ 6 ಪುಟಗಳಷ್ಟು ಉತ್ತರ ನೀಡಿದ್ದಾರೆ. ಬಳಿಕ ಮಾತನಾಡಿದ ಯತ್ನಾಳ್, ರಾಜ್ಯದಲ್ಲಿ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ಗಮನ ಕೊಡಬೇಡಿ ಅಂತ ಹೇಳಿದ್ದಾರೆ ಎಂದರು.
ನಮ್ಮ ಪಕ್ಷದ ಆಂತರಿಕ ವಿಚಾರಗಳು ಏನೇ ಇದ್ದರೂ ಅದನ್ನು ಬಹಿರಂಗವಾಗಿ ಮಾತನಾಡಬೇಡಿ ಎಂದು ಸೂಚಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ವಿರುದ್ಧದ ಬಿಜೆಪಿ ಹೋರಾಟಕ್ಕೆ ಗಮನ ಕೊಡಿ ಎಂದಿರುವುದಾಗಿ ಯತ್ನಾಳ್ ತಿಳಿಸಿದ್ದಾರೆ.