Ad imageAd image

ಡಿಸಿಎಂಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ 

Bharath Vaibhav
ಡಿಸಿಎಂಗೆ ಬಿಗ್ ರಿಲೀಫ್ : ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ 
DKS
WhatsApp Group Join Now
Telegram Group Join Now

ಬೆಂಗಳೂರು : ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಸರ್ಕಾರದ ವಿವಿಧ ಹುದ್ದೆಗಳಿಗೆ ದರ ನಿಗದಿಪಡಿಸಿದೆ ಎಂದು ಆರೋಪಿಸಿ ರಾಜ್ಯದ ಪ್ರಮುಖ ದಿನ ಪತ್ರಿಕೆಗಳ ಮುಖಪುಟದಲ್ಲಿ ‘ಭ್ರಷ್ಟಾಚಾರ ದರ ಪಟ್ಟಿ’ ಎಂಬ ಹೆಸರಿನಲ್ಲಿ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಮತ್ತು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ಇಂದು ತಡೆ ನೀಡಿತು.

ಕಳೆದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಅವಿಧಿಯಲ್ಲಿ ಭ್ರಷ್ಟಾಚಾರದ ದರ ಪಟ್ಟಿ ಹೆಸರಿನಲ್ಲಿ ಬಿಜೆಪಿ ವಿರುದ್ಧ ಜಾಹೀರಾತು ಪ್ರಕಟಿಸಿದ್ದ ಆರೋಪದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಹೈಕೋರ್ಟ್ ತಡೆ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಇದೇ ಪ್ರಕರಣದಲ್ಲಿ ರಾಹುಲ್ ಗಾಂಧಿ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ಜನವರಿ ತಿಂಗಳಲ್ಲಿ ತಡೆ ನೀಡಿತ್ತು.

ಬಿಜೆಪಿ ರಾಜ್ಯ ಘಟಕದ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಎಸ್.ಕೇಶವ ಪ್ರಸಾದ್ ಎಂಬವರು ಸಲ್ಲಿಸಿದ್ದ ಖಾಸಗಿ ದೂರಿನನ್ವಯ ದಾಖಲಾಗಿರುವ ಪ್ರಕರಣ ರದ್ದತಿ ಕೋರಿ ಕೆಪಿಸಿಸಿ ಮತ್ತು ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ಏಕ ಸದಸ್ಯಪೀಠ, ಈ ಆದೇಶ ನೀಡಿದೆ. ಪ್ರತಿವಾದಿಯಾಗಿರುವ ದೂರುದಾರರಿಗೆ ನೋಟಿಸ್ ಜಾರಿ ಮಾಡಿದೆ.

WhatsApp Group Join Now
Telegram Group Join Now
Share This Article
error: Content is protected !!