ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ ಜಾಮೀನು ಅರ್ಜಿಯ ವಿಚಾರಣೆ ನಡೆಸಲಾಗಿದ್ದು, ಅವರನ್ನು ಬಿಡುಗಡೆ ಮಾಡುವಂತೆ ಹೈಕೋರ್ಟ್ ಆದೇಶ ನೀಡಿದೆ.
ಲಕ್ಷ್ಮಿ ಹೆಬ್ಬಾಳ್ಕರ್ ರಿಗೆ ಅಶ್ಲೀಲ ಪದ ಬಳಕೆ ಆರೋಪದಡಿ ಬೆಳಗಾವಿ ಜಿಲ್ಲೆಯ ಹಿರೇಬಾಗೇವಾಡಿ ಪೊಲೀಸರು ಸಿ.ಟಿ.ರವಿ ಬಂಧಿಸಿದ್ದರು. ಇಂದು ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಕೂಡಲೇ ಸಿ.ಟಿ. ರವಿ ಬಿಡುಗಡೆ ಮಾಡಬೇಕೆಂದು ಮಧ್ಯಂತರ ಆದೇಶ ನೀಡಿದೆ.
ಈ ಮೂಲಕ ಸಿ.ಟಿ. ರವಿಗೆ ಬಿಗ್ ರಿಲೀಫ್ ಸಿಕ್ಕಿದೆ. ತನಿಖೆಗೆ ಸಹಕರಿಸಬೇಕೆಂದು ಸಿ.ಟಿ. ರವಿ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್ ಷರತ್ತು ವಿಧಿಸಿದೆ