ಕಿತ್ತೂರು: ಹೌದು ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ತಹಸೀಲ್ದಾರ್ ಕಚೇರಿಯಲ್ಲಿ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ತಹಸೀಲ್ದಾರ್ ರವೀಂದ್ರ ಹಾದಿಮನಿ ಹಾಗೂ ತಾಲ್ಲೂಕು ಪಂಚಾಯಿತಿ ಇ. ಓ ಸಂತೋಷ್ ಹೂಲಿ, ಉಪ ತಹಶೀಲ್ದಾರ್ ಆರ್.ಎಸ್ ನೇಸರ್ಗಿ ನೇತೃತ್ವದಲ್ಲಿ ಮಳೆಗಾಲದಲ್ಲಿ ಕೈ ಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಬಗ್ಗೆ ತಾಲ್ಲೂಕಿನಲ್ಲಿ ಸಂಭವಿಸಬಹುದಾದ ಅನಾಹುತಗಳ ಬಗ್ಗೆ ಎಲ್ಲಾ ಅಧಿಕಾರಿಗಳೊಂದಿಗೆ ಚರ್ಚಿಸಿ ಜಾಗ್ರತೆ ವಹಿಸುವಂತೆ ಸೂಚನೆ ನೀಡಲಾಯಿತು.

ಈ ಸಂದರ್ಭದಲ್ಲಿ ಕಿತ್ತೂರು ಕರ್ನಾಟಕ ರಾಜ್ಯ ರೈತ ಸಂಘದಿಂದ ರೈಲ್ವೆ ಇಲಾಖೆಯ ಪರಿಹಾರದ ಹೆಚ್ಚಳಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ತಾಲ್ಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳಿಗೆ ಕಂದಾಯ ಇಲಾಖೆ ವತಿಯಿಂದ ಲ್ಯಾಪ್ ಟಾಪ್ ಗಳನ್ನು ವಿತರಣೆ ಮಾಡಲಾಯಿತು.
ನಂತರ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂವಾದದಲ್ಲಿ ಮಾತನಾಡಿದ ಬಾಬಾ ಸಾಹೇಬ್ ಪಾಟೀಲ್ ಮಾತನಾಡಿದರು. ತಾಲ್ಲೂಕಿನ ಎಲ್ಲಾ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ವರದಿ: ಬಸವರಾಜು




