ಬೆಂಗಳೂರು: ಹುಬ್ಬಳ್ಳಿ ವಿದ್ಯಾರ್ಥಿನಿ ನೇಹಾ ಹತ್ಯೆ ಪ್ರಕರಣದ ಶೀಘ್ರ ಇತ್ಯರ್ಥಕ್ಕಾಗಿ ವಿಶೇಷ ನ್ಯಾಯಾಲಯ ಸ್ಥಾಪಿಸಲು ನಿರ್ಧರಿಸಲಾಗಿದೆ. ಈ ಕುರಿತಾಗಿ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳಿಗೆ ಮನವಿ ಸಲ್ಲಿಸಿರುವುದಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಹುಬ್ಬಳ್ಳಿ, ಧಾರವಾಡದಲ್ಲಿ ಶಾಂತಿ ಕಾಪಾಡಲು ಸರ್ಕಾರ ಎಲ್ಲಾ ಕ್ರಮ ಕೈಗೊಂಡಿದೆ. ನೇಹಾ, ಅಂಜಲಿ ಹತ್ಯೆ ಪ್ರಕರಣ ನಡೆದಿರುವುದು ವಿಷಾದನೀಯ. ಇಂತಹ ಘಟನೆಗಳು ಆಗಬಾರದು. ಗೃಹ ಸಚಿವರು ಈ ಹತ್ಯೆ ಪ್ರಕರಣಗಳ ಕುರಿತಂತೆ ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಅಂಜಲಿ ಹತ್ಯೆ ಪ್ರಕರಣವನ್ನು ವಿಶೇಷ ನ್ಯಾಯಾಲಯ ವ್ಯಾಪ್ತಿಗೆ ತರುವ ಕುರಿತಂತೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಮಾಹಿತಿ ನೀಡಿದ್ದಾರೆ.