ಬೆಳಗಾವಿ : ಬೆಳಗಾವಿಯಲ್ಲಿ ಇದೇ ಡಿಸೆಂಬರ್ 26, 27ರಂದು ಗಾಂಧಿ ಭಾರತ ಕಾರ್ಯಕ್ರಮ ನಡೆಯಲಿರುವ ಹಿನ್ನೆಲೆಯಲ್ಲಿ ಎರಡು ದಿನ ಬೆಳಗಾವಿಯ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಆದೇಶ ಹೊರಡಿಸಿದ್ದಾರೆ.
ನಾಳೆ ಹಾಗೂ ನಾಡಿದ್ದು ಬೆಳಗಾವಿ ನಗರ ಮತ್ತು ಗ್ರಾಮೀಣ ವಲಯದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.
ಇದಲ್ಲದೇ ಬೆಳಗಾವಿ ನಗರ ಮತ್ತು ಗ್ರಾಮೀಣ ಯೋಜನೆಯ ಅಂಗನವಾಡಿ ಕೇಂದ್ರಗಳಿಗೂ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.