Ad imageAd image

ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಗೃಹಿಣಿ ಆತ್ಮಹತ್ಯೆ 

Bharath Vaibhav
ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಗೃಹಿಣಿ ಆತ್ಮಹತ್ಯೆ 
WhatsApp Group Join Now
Telegram Group Join Now

ಉಡುಪಿ: ಮಾನಸಿಕ ಖಿನ್ನತೆಗೊಳಗಾಗಿ ಅತಿಥಿ ಶಿಕ್ಷಕಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದು ಗ್ರಾಮದಲ್ಲಿ ನಡೆದಿದೆ.

ಪ್ರಸನ್ನಾ (29) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕಿ. ಮೂಡುಬಿದಿರೆಯ ನಿವಾಸಿಯಾಗಿರುವ ಪ್ರಸನ್ನಾ ಅವರಿಗೆ 2022ರಲ್ಲಿ ಕಾರ್ಕಳ ತಾಲೂಕು ಈದು ಗ್ರಾಮದ ರಾಜೇಶ್ ಎಂಬವರೊಂದಿಗೆ ಮದುವೆಯಾಗಿತ್ತು.

ರಾಜೇಶ್ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರೆ, ಪ್ರಸನ್ನ ಅವರು ಹೊಸ್ಮಾರ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕಿಯಾಗಿದ್ದರು. ಈ ದಂಪತಿಗೆ 10 ತಿಂಗಳ ಹೆಣ್ಣು ಮಗು ಕೂಡ ಇದೆ.

ಪ್ರಸನ್ನಾ ತನ್ನ ತಾಯಿಗೆ ಕರೆ ಮಾಡಿದಾಗ ಗಂಡನ ಮನೆಯವರು ಚೆನ್ನಾಗಿ ನೋಡುತ್ತಿದ್ದಾರೆ. ಆದರೆ ನನಗೆ ಇಷ್ಟು ಬೇಗ ಮಗು ಬೇಡವಾಗಿತ್ತು. ಕಷ್ಟಪಟ್ಟು ಓದಿಯೂ ಮಗುವಾದ ಕಾರಣ ಕೆಲಸಕ್ಕೆ ಹೋಗಲು ಆಗುತ್ತಿಲ್ಲ ಎಂದು ಕೊರಗುತ್ತಿದ್ದರು. ಇದೇ ವಿಚಾರವಾಗಿ ಆಕೆ ಖಿನ್ನತೆಗೆ ಜಾರಿದ್ದು, ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ನಿನ್ನೆ (ನ. 6) ಗಂಡನ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ಬಗ್ಗೆ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

WhatsApp Group Join Now
Telegram Group Join Now
- Advertisement -  - Advertisement -  - Advertisement - 
Share This Article
error: Content is protected !!