ನವದೆಹಲಿ : ರಾಜ್ಯ ಬಿಜೆಪಿಯು ಕಾಂಗ್ರೆಸ್ ಸರ್ಕಾರದ ವಿರುದ್ಧ ಬೆಲೆ ಏರಿಕೆ ವಿಚಾರವಾಗಿ ಬೃಹತ್ ಹೋರಾಟ ನಡೆಸುತ್ತಿರುವ ಮಧ್ಯೆಯೇ ಅತ್ತ ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ಮೇ ಲಿನ ತೆರಿಗೆಯನ್ನೂ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.
ಇದರಿಂದ ರಾಜ್ಯ ಮತ್ತು ದೇಶದ ಜನತೆಗೆ ಮತ್ತೊಂದು ಬೆಲೆ ಏರಿಕೆ ಬಿಸಿ ತಟ್ಟಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಗ್ರಾಹಕರಿಗೆ ಶಾಕ್ ಕೊಟ್ಟಿದೆ.ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಯನ್ನು ಕೇಂದ್ರ ಸರ್ಕಾರ ಇದೀಗ ಏರಿಕೆ ಮಾಡಿದೆ.
ಕೇಂದ್ರ ಅಬಕಾರಿ ಸುಂಕವನ್ನು 2 ರೂಪಾಯಿಯನ್ನು ಹೆಚ್ಚಳ ಮಾಡಿದ್ದು, ತೈಲ ಬೆಲೆ ಏರಿಕೆ ವಿರುದ್ಧ ಹೋರಾಟ ನಡೆಸುತ್ತಿರುವ ಬಿಜೆಪಿಗೆ ಮತ್ತಷ್ಟು ಮುಜುಗರ ಸಾಧ್ಯತೆ ಇದೆ. ಕೇಂದ್ರದ ಈ ನಡೆ ಕಾಂಗ್ರೆಸ್ ಹಾಗೂ ವಿಪಕ್ಷಗಳಿಗೆ ಕೇಂದ್ರವನ್ನು ಹಣಿಯಲು ದೊಡ್ಡ ಅಸ್ತ್ರ ಸಿಕ್ಕಂತಾಗಿದೆ.
ಭಾರತ ಸರ್ಕಾರ ಡೀಸೆಲ್ ಮತ್ತು ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 2 ರೂ. ಹೆಚ್ಚಿಸಿದೆ. ಹಣಕಾಸು ಸಚಿವಾಲಯದ ಕಂದಾಯ ಇಲಾಖೆ ಹೊರಡಿಸಿದ ಅಧಿಸೂಚನೆಯ ಪ್ರಕಾರ, ಈ ಬದಲಾವಣೆಯು ಏಪ್ರಿಲ್ 8, 2025 ರಿಂದ ಜಾರಿಗೆ ಬರಲಿದೆ.