Ad imageAd image

ಜೂ. 30ಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ

Bharath Vaibhav
ಜೂ. 30ಕ್ಕೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಚುನಾವಣೆ
WhatsApp Group Join Now
Telegram Group Join Now

ಹುಬ್ಬಳ್ಳಿ/ಧಾರವಾಡ : ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ 24ನೇ ಅವಧಿಗೆ ಮಹಾಪೌರ ಹಾಗೂ ಉಪ ಮಹಾಪೌರರ ಸ್ಥಾನಗಳಿಗೆ ಜೂನ್ 30 ರಂದು ಬೆಳಗ್ಗೆ 9 ಗಂಟೆಗೆ ಪಾಲಿಕೆಯ ಸಭಾಭವನದಲ್ಲಿ ಚುನಾವಣೆ ನಡೆಯಲಿದೆ ಎಂದು ಬೆಳಗಾವಿ ವಿಭಾಗದ ಪ್ರಾದೇಶಿಕ ಆಯುಕ್ತ ಎಸ್. ಬಿ. ಶೆಟ್ಟೆಣ್ಣವರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರಾದೇಶಿಕ ಆಯುಕ್ತ ಎಸ್‌ಬಿ ಶೆಟ್ಟೆಣ್ಣವರ್ ಅವರು ಜೂನ್ 30 ರಂದು ಕಾರ್ಪೊರೇಷನ್‌ನ ಸಭೆಯ ಸಭಾಂಗಣದಲ್ಲಿ ಎಚ್‌ಡಿಎಂಸಿಯ 24 ನೇ ಅವಧಿಗೆ ಮೇಯರ್ ಮತ್ತು ಉಪ ಮೇಯರ್ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸುವ ಅಧಿಸೂಚನೆಯನ್ನು ಹೊರಡಿಸಿದ್ದಾರೆ.

ಆ ದಿನ, ಬೆಳಿಗ್ಗೆ 9.00 ರಿಂದ ಬೆಳಿಗ್ಗೆ 11.00 ರವರೆಗೆ, ಮೇಯರ್ ಮತ್ತು ಉಪ ಮೇಯರ್ ಹುದ್ದೆಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುತ್ತದೆ.

ಅದರ ನಂತರ, ನಾಮಪತ್ರಗಳ ಪರಿಶೀಲನೆ, ಮಾನ್ಯ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳುವುದು, ಅಭ್ಯರ್ಥಿಗಳ ಅಂತಿಮ ಪಟ್ಟಿಯ ಪ್ರಕಟಣೆ, ಅವಿರೋಧ ಚುನಾವಣೆಯ ಸಂದರ್ಭದಲ್ಲಿ ಫಲಿತಾಂಶಗಳ ಘೋಷಣೆ, ಒಂದಕ್ಕಿಂತ ಹೆಚ್ಚು ಅಭ್ಯರ್ಥಿಗಳಿದ್ದರೆ ಕೈ ಎತ್ತುವ ಮೂಲಕ ಮತದಾನ, ಮತಗಳ ಎಣಿಕೆ ಮತ್ತು ಫಲಿತಾಂಶಗಳ ಘೋಷಣೆಯ ಪ್ರಕ್ರಿಯೆಗಳು ನಡೆಯುತ್ತವೆ.

ಈ‌ ಬಾರಿ ಮೇಯರ್ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲು ಇರುವುದರಿಂದ ಆಕಾಂಕ್ಷಿಗಳ ಸಂಖ್ಯೆಯೂ ಹೆಚ್ಚಿದೆ. ಪಾಲಿಕೆಯಲ್ಲಿ 15 ಜನ ಬಿಜೆಪಿ ಮಹಿಳಾ ಸದಸ್ಯರಿದ್ದಾರೆ.
ಇವರಲ್ಲಿ ಪ್ರೀತಿ‌ ಖೋಡೆ, ಪೂಜಾ ಶೆಜವಾಡಕರ್, ರಾಧಾಬಾಯಿ ಸಫಾರಿ,‌ ಮೀನಾಕ್ಷಿ ವಂಟಮೂರಿ ಸೇರಿದಂತೆ ಹಲವರು ಮೇಯರ್ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ.

ಹುಬ್ಬಳ್ಳಿ, ಧಾರವಾಡ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರದಲ್ಲಿದೆ. ಅಧಿಸೂಚನೆ ಪ್ರಕಾರ ಮೇಯರ್ ಸ್ಥಾನ ಸಾಮಾನ್ಯ ಮಹಿಳೆ ಮತ್ತು ‌ಉಪಮೇಯರ್ ಸ್ಥಾನ ಹಿಂದುಳಿದ ವರ್ಗ ಬ ಗೆ ಮೀಸಲಿದೆ. ಹೀಗಾಗಿ ಮತ್ತೊಮ್ಮೆ ಮಹಿಳಾ ಸಾರಥ್ಯ ಸಿಗಲಿದೆ.
82 ಸದಸ್ಯ ಬಲವಿರುವ ಪಾಲಿಕೆಯಲ್ಲಿ 39 ಬಿಜೆಪಿ, 33 ಕಾಂಗ್ರೆಸ್, 3 ಎಐಎಂಐಎಂ, 6 ಪಕ್ಷೇತರರು ಹಾಗೂ ಓರ್ವ ಜೆಡಿಎಸ್ ಸದಸ್ಯರಿದ್ದಾರೆ. ಪಕ್ಷೇತರರಲ್ಲಿ ಮೂವರು ಬಿಜೆಪಿ ಸೇರಿದ್ದಾರೆ. ಬಹುತೇಕ ಬಿಜೆಪಿ ಪಾಲಿಕೆ ಚುಕ್ಕಾಣಿ ಹಿಡಿಯುವ ಸಾದ್ಯತೆಯಿದೆ.

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!