ಹುಬ್ಬಳ್ಳಿ: ಅಂತರ್ಜಾತಿ ವಿವಾಹವಾಗಿದ್ದಕ್ಕೆ ಮರ್ಯಾದೆಗೇಡು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಲಿ ಗ್ರಾಮ ಪಂಚಾಯಿತಿ ಪಿಡಿಒ ನಾಗರಾಜ್ ಗಿರಿಯಪ್ಪನವರ್ ಅವರನ್ನು ಅಮಾನತು ಮಾಡಲಾಗಿದೆ.
ಕರ್ತವ್ಯ ನಿರ್ಲಕ್ಷ್ಯ ಆರೋಪದಡಿ ಪಿಡಿಒ ನಾಗರಾಜ್ ಅವರನ್ನು ಅಮಾನತು ಮಾಡಲಾಗಿದೆ ಜಿಲ್ಲಾ ಪಂಚಾಯಿತಿ ಸಿಇಒ ಭುವನೇಶ್ ಪಾಟೀಲ್ ಅಮಾನತು ಮಾಡಿದ್ದಾರೆ.ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರದಲ್ಲಿ ಮರ್ಯಾದೆಗೇಡು ಹತ್ಯೆ ನಡೆದಿತ್ತು.
ಮಾನ್ಯಾ ಪಾಟೀಲ್ ಚಿಕಿತ್ಸೆ ಮತ್ತು ಅಂತ್ಯಕ್ರಿಯ ವೇಳೆ ತಕ್ಷಣಕ್ಕೆ ಸ್ಪಂದಿಸಿರಲಿಲ್ಲ. ಸ್ಥಳೀಯ ಸಮಿತಿಯವರು ಸಭೆ ಕರೆದಾಗ ಬಂದಿರಲಿಲ್ಲ. ಪಿಡಿಒ ವಿರುದ್ಧ ದಲಿತ ಸಂಘಟನೆಗಳು ಆಕ್ರೋಶ ಹೊರ ಹಾಕಿದ್ದವು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ವರದಿ ಆಧರಿಸಿ ಕ್ರಮ ಕೈಗೊಳ್ಳಲಾಗಿದೆ.
ಪಿಡಿಒ ನಾಗರಾಜ್ ಸಾಮಾಜಿಕ ಸ್ಥಾಯಿ ಸಮಿತಿ ಸದಸ್ಯರ ಸಭೆ ನಡೆಸಿ ಕೈಗೊಂಡ ಕ್ರಮಗಳ ಕುರಿತ ಠರಾವು ಪಾಸು ಮಾಡಿಲ್ಲ. ಮಾನ್ಯಾ ಅವರ ಶವ ಸಂಸ್ಕಾರ ಸಂದರ್ಭದಲ್ಲೇ ನಡೆದ ಸಮಾಲೋಚನಾ ಸಭೆಯಲ್ಲಿ ಭಾಗವಹಿಸಿರಲಿಲ್ಲ. ಪೊಲೀಸರು ಸಹಾಯ ಕೇಳಿದಾಗ ಸ್ಪಂದಿಸದೆ ಶಿಷ್ಟಾಚಾರ ಪಾಲನೆಯಲ್ಲಿ ನಿರ್ಲಕ್ಷ್ಯ ತೋರಿದ್ದಾರೆ. ಕರ್ತವ್ಯ ಲೋಪ, ಬೇಜವಾಬ್ದಾರಿತನ ಪ್ರದರ್ಶಿಸಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಲಾಗಿದೆ.




