———————————————————————-ರಾರಾಜಿಸಿದ 900 ಮೀಟರ್ ಉದ್ದದ ತ್ರಿವರ್ಣ ಧ್ವಜ
ಚಿಕ್ಕೋಡಿ:ಭಾರತ ಸೇನೆಯು ಪಾಕಿಸ್ತಾನದ ವಿರುದ್ಧ ಕೈಗೊಂಡ ಅಪರೇಶನ್ ಸಿಂಧೂರ ಯಶಸ್ವಿಯಾದ ಹಿನ್ನೆಲೆಯಲ್ಲಿ ನಿಪ್ಪಾಣಿ ನಗರದಲ್ಲಿ ಬೃಹತ್ ತಿರಂಗಾ ಯಾತ್ರೆ ಜರುಗಿತು.
ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ, ಭಾರತಾಂಬೆ ಭಾವಚಿತ್ರಕ್ಕೆ ಸ್ಥಳೀಯ ವಿರೂಪಾಕ್ಷಲಿಂಗ ಸಮಾಧಿ ಮಠದ ಪ್ರಾಣಲಿಂಗ ಸ್ವಾಮೀಜಿ, ಆರುಣಾನಂದ ಸ್ವಾಮೀಜಿ, ಬಸವಪ್ರಸಾದ ಜೊಲ್ಲೆ ನಗರಸಭೆ ಅಧ್ಯಕ್ಷೆ ಸೋನಾಲಿ ಕೊಠಡಿಯಾ, ಉಪಾಧ್ಯಕ್ಷ ಸಂತೋಷ ಸಾಂಗಾವಕರ ಮತ್ತು ಗಣ್ಯರು ಪೂಜೆ ಸಲ್ಲಿಸಿ ಯಾತ್ರೆಗೆ ಚಾಲನೆ ನೀಡಿದರು.
ರ್ಯಾಲಿಯಲ್ಲಿ ಭಾಗವಹಿಸಿದ್ದ ಜನರು ”ಭಾರತ್ ಮಾತಾ ಕಿ ಜೈ, ಜೈ ಜವಾನ್ ಜೈ ಕಿಸಾನ್, ಛತ್ರಪತಿ ಶಿವಾಜಿ ಮಹಾರಾಜ್ ಕಿ ಜೈ” ಸೇರಿದಂತೆ ವಿವಿಧ ಘೋಷಣೆ ಕೂಗಿದರು. ಸುಮಾರು 900 ಮೀಟರ್ ಉದ್ದದ ತ್ರಿವರ್ಣ ಧ್ವಜ ಗಮನ ಸೆಳೆಯಿತು.
ಜೊಲ್ಲೆ ಗ್ರುಪ್ ನ ಉಪಾಧ್ಯಕ್ಷ ಬಸವಪ್ರಸಾದ ಜೊಲ್ಲೆ ಮಾತನಾಡಿ, ಮಾಜಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕಿ ಶಶಿಕಲಾ ಜೊಲ್ಲೆಯವರ ಮಾರ್ಗದರ್ಶನದಲ್ಲಿ ಆಪರೇಷನ್ ಸಿಂಧೂರ ಸ್ಮರಣಾರ್ಥ ನಗರದಲ್ಲಿ ಸ್ಥಾರಕ ನಿರ್ಮಿಸಲಾಗುವುದು. ನಗರಸಭೆಯು ಸೈನಿಕರ ಸ್ಮಾರಕಕ್ಕಾಗಿ ಭೂಮಿ ಅನುಮೋದಿಸಿದೆ,” ಎಂದರು.
ಯಾತ್ರೆಯು ಪ್ರಮುಖ ಬೀದಿಗಳಲ್ಲಿ ಸಾಗಿ ಛತ್ರಪತಿ ಶಿವಾಜಿ ಮಹಾರಾಜ ವೃತ್ತಕ್ಕೆ ತಲುಪಿ ಕೊನೆಗೊಂಡಿತು. ತಹಸೀಲ್ದಾರ್ ಮುಜಪರ್ ಬಳಿಗಾರ, ಕ್ಷೇತ್ರ ಶಿಕ್ಷಣಾಧಿಕಾರಿ ಮಹಾದೇವಿ ನಾಯಿಕ, ತಳವಾರ, ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಮಲಗೊಂಡ ಪಾಟೀಲ, ಉಪಾಧ್ಯಕ್ಷ ಪವನಕುಮಾರ ಪಾಟೀಲ, ನಿರ್ದೇಶಕರು, ನಗರಸಭೆ ಸದಸ್ಯರು, ಪದಾಧಿಕಾರಿಗಳು, ಉಪಸ್ಥಿತರಿದ್ದರು.
ವರದಿ: ರಾಜು ಮುಂಡೆ




