ಸೇಡಂ:– ತಾಲೂಕಿನ ಮಳಖೇಡ ಗ್ರಾಮ ಪಂಚಾಯತ್ ಕಾರ್ಯಾಲಯದಲ್ಲಿ ಇಂದು ಹೈದರಾಬಾದ್ ಕರ್ನಾಟಕ ವಿಮೋಚನಾ ದಿನಾಚರಣೆಯನ್ನು ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್, ಮಹಾತ್ಮ ಗಾಂಧಿ, ಸರದಾರ್ ವಲ್ಲಭಬಾಯಿ ಪಟೇಲ್ ಅವರ ಭಾವಚಿತ್ರಗಳಿಗೆ ಮಾಲಾರ್ಪಣೆ ಮಾಡುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಚನ್ನಯ್ಯ ವಿ ಪುರಾಣಿಕ್, ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ರವಿಕುಮಾರ್ ಸಣ್ಣದನಿ, ದಲಿತ ಸೇನೆ ವಲಯ ಅಧ್ಯಕ್ಷರಾದ ಭಗವಾನ್ ಭೋಚಿನ್, ಸಿದ್ಧಲಿಂಗಯ್ಯ ಸ್ವಾಮಿ, ಮಲ್ಲಪ್ಪ ಅರ್ಬೋಳು, ರಾಜಪ್ಪ ಮಂಗ, ಅಲಿ ಆಗ, ಮಾರುತಿ ನಂದೂರ್ ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.
ವರದಿ:- ವೆಂಕಟಪ್ಪ ಕೆ ಸುಗ್ಗಾಲ್.