ಬೆಳಗಾವಿ : ಮೂರು ಡಿಸಿಎಂ ಸ್ಥಾನಕ್ಕೆ ಸಚಿವ ಕೆ ಎನ್ ರಾಜಣ್ಣ ಬೇಡಿಕೆ ವಿಚಾರವಾಗಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಮಾತನಾಡಿ, ಸಹಕಾರ ಸಚಿವ ಕೆಎನ್ ರಾಜಣ್ಣ ಅವರು ತಮ್ಮ ಅಭಿಪ್ರಾಯವನ್ನು ತಿಳಿಸಿದ್ದಾರೆ.ಈ ಕುರಿತಂತೆ ಅಂತಿಮವಾಗಿ ಪಕ್ಷ ನಿರ್ಧರಿಸುತ್ತದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಕೆ ಎನ್ ರಾಜಣ್ಣ ಹೇಳಿದ ಮೇಲೆ ಚರ್ಚೆ ಶುರುವಾಗಬಹುದು. ಅವಶ್ಯಕತೆ ಇದೆಯೋ ಅಥವಾ ಇಲ್ಲವೋ ಎನ್ನುವುದು ಪಕ್ಷ ತೀರ್ಮಾನ ಮಾಡಬೇಕು. ನಾನಂತೂ ಡಿಸಿಎಂ ಆಕಾಂಕ್ಷಿ ಅಲ್ಲವೇ ಅಲ್ಲ.
ಉಪಮುಖ್ಯಮಂತ್ರಿ ಸ್ಥಾನ ಬೇಕೆಂದು ಬಹಳಷ್ಟು ಜನ ಹೇಳಿದ್ದಾರೆ.ಅವರವರ ಸಾಮರ್ಥ್ಯ ನೋಡಿ ಪಕ್ಷ ಡಿಸಿಎಂ ಮಾಡುತ್ತೆ ಎಂದು ಬೆಳಗಾವಿ ನಗರದಲ್ಲಿ ಪಿಡಬ್ಲ್ಯೂಡಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.