ದಾವಣಗೆರೆ : ಬಿಜೆಪಿ ಉಚ್ಚಾಟಿತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷಕ್ಕೆ ಸೇರುತ್ತಾರೆ ಎಂಬ ವದಂತಿಗಳಿಗೆ ತೆರೆ ಎಳೆದಿದ್ದಾರೆ. ನಾನು ಅಲ್ಲ, ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ಅವರು, ಹೊಸ ಪಕ್ಷ ಕಟ್ಟುವುದು ಅಷ್ಟು ಸುಲಭವಲ್ಲ.ಹೊಸ ಪಕ್ಷ ಕಟ್ಟಿ ಹಿಂದೂಗಳ ಮತ ವಿಭಜನೆ ಮಾಡಬಾರದು ಎಂಬುದು ನನ್ನ ಉದ್ದೇಶವಾಗಿದೆ ಎಂದರು.
ನಾನು ಕಾಂಗ್ರೆಸ್ ಪಕ್ಷ ಸೇರುತ್ತೇನೆ ಎಂಬುದು ಸುಳ್ಳು. ನಾನು ಅಲ್ಲ ನನ್ನ ಹೆಣ, ಚಪ್ಪಲಿ ಕೂಡ ಕಾಂಗ್ರೆಸ್ ಪಕ್ಷಕ್ಕೆ ಹೋಗೋದಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.
ಡಿಕೆಶಿ ಸಿಎಂ, ವಿಜಯೇಂದ್ರ ಡಿಸಿಎಂ ಅಂತ ದೆಹಲಿಯಲ್ಲಿ ಡೀಲ್ ಆಗಿತ್ತು ಡಿಕೆಶಿ ಸಿಎಂ, ವಿಜಯೇಂದ್ರ ಉಪಮುಖ್ಯ ಮಂತ್ರಿ ಅಂತ ದೆಹಲಿಯಲ್ಲಿ ಡೀಲ್ ಆಗಿತ್ತು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೊಸ ಬಾಂಬ್ ಸಿಡಿಸಿದ್ದಾರೆ.
ದಾವಣಗೆರೆಯಲಿ ಮಾತನಾಡಿದ ಅವರು, ನಾನು ಹೈಕಮಾಂಡ್ಗೆ ಕ್ಷಮೆ ಕೇಳಿಲ್ಲ. ಯಾವುದೂ ಪತ್ರ ಕೂಡ ಬರೆದಿಲ್ಲ, ಕೈಮುಗಿದಿಲ್ಲ. ನನಗೆ ಅದರ ಅವಶ್ಯಕತೆ ಇಲ್ಲ.
ಅಲ್ಲದೆ ಒಂದು ಪಕ್ಷದ ರಾಜ್ಯಾಧ್ಯಕ್ಷ ಬರುತ್ತಾರೆ ಎಂದರೆ ಕನಿಷ್ಠ ಸಾವಿರಾರು ಜನರಾದರೂ ಸೇರಬೇಕು. ಆದರೆ, ಬಿಜೆಪಿ ನಡೆಸಿದ ಈ ಜನಾಕ್ರೋಶ ಯಾತ್ರೆಯಲ್ಲಿ 800ರಿಂದ 1000 ಜನ ಅಷ್ಟೇ ಸೇರಿದ್ದರು.
ನಾನು ಯಾವುದಾದರೊಂದು ಕಾರ್ಯಕ್ರಮಕ್ಕೆ ತೆರಳಿದರೆ ಏನಿಲ್ಲವೆಂದರೂ 20 ಸಾವಿರ ಜನ ಸೇರುತ್ತಾರೆ. ಬಿಜೆಪಿ ಹೊಂದಾಣಿಕೆ ರಾಜಕಾರಣದಿಂದ ರಾಜ್ಯದ ಜನರಿಗೆ ಮೋಸ ಆಗುತ್ತಿದೆ ಎಂದರು.