ಹುಬ್ಬಳ್ಳಿ : ನಾನು ಯಾವತ್ತು ಕೋಮುದ್ವೇಷ ಹರಡಿಸುವಂತಹ ಕೆಲಸ ಮಾಡಿಲ್ಲ. ನಾನು ಶುದ್ದ ಹಿಂದೂಸ್ಥಾನಿ ಭಾರತೀಯ. 24ಕ್ಯಾರೆಟ್ ಗೋಲ್ಡ್. ನನ್ನನ್ನು ಹೇಗೆ ಕಿತ್ತು ಹಾಕುತ್ತಾರೆ’ ಎಂದು ಸಚಿವ ಜಮೀರ್ ಅಹ್ಮದ್ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತಾಡಿದ ಆವರು, ಜೋಶಿಯವರು ಹಿಂದೂ ಮುಸ್ಲಿಂ ಬಿಟ್ಟರೆ ಏನೂ ಮಾತನಾಡಲ್ಲ.ಮುಸಲ್ಮಾನರು ಮತ ನೀಡಲ್ಲ ಅಂತ ಬಿಜೆಪಿಯವರು ಅವರನ್ನು ದ್ವೇಷ ಮಾಡುತ್ತಿದ್ದಾರೆ. ಒಂದು ವೇಳೆ ಮತ ಕೊಟ್ಟರೆ ಮುಸಲ್ಮಾನರು ಒಳ್ಳೆಯವರು ಎಂದು ಟಾಂಗ್ ನೀಡಿದರು.
ನಾನೊಬ್ಬ ಭಾರತೀಯ. ನಂತರ ರಾಜಕಾರಣಿ. ನನಗೆ ಎಲ್ಲಾ ಜನಾಂಗದವರು ಬೇಕು. ಯಾವುದೇ ಕಾರಣಕ್ಕೂ ಜಾತಿ ರಾಜಕಾರಣ ಮಾಡುತ್ತಿಲ್ಲ. ರಾಜಕೀಯಕ್ಕೆ ಬಂದ ಮೇಲೆ ಅದನ್ನೆಲ್ಲ ಬಿಡಬೇಕು. ಇಲ್ಲವೇ ಮನೆಯಲ್ಲಿ ಕುಳಿತುಕೊಳ್ಳಬೇಕು ಎಂದು ಸಚಿವ ಜಮೀರ ಅಹ್ಮದ ಖಾನ್ ಕೌಂಟರ್ ನೀಡಿದ್ರು.
ಬಿಜೆಪಿಯವರು ರೈತರನ್ನು ಎತ್ತಿ ಕಟ್ಟುತ್ತಿದ್ದಾರೆ. ನಾನು ವಕ್ಫ ಸಚಿವನಾಗಿ ಹೇಳುತ್ತೇನೆ ಯಾವ ರೈತರಿಗೂ ತೊಂದರೆ ಆಗಲ್ಲ. ಮಹಾರಾಷ್ಟ್ರ ಇತರೆಡೆ ಚುನಾವಣೆ ಇರುವುದಕ್ಕಾಗಿ ಬಿಜೆಪಿಯವರು ಹೀಗೆಲ್ಲಾ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.