ಬೆಂಗಳೂರು: ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರಕ್ಕೆ ನಾನು ಡಿ.ಕೆ.ಶಿವಕುಮಾರ್ ಬದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಶಾಂಗ್ರಿಲಾ ಹೋಟೆಲ್ ನಲ್ಲಿ ಮಾತನಾಡಿದ ಸಿದ್ದರಾಮಯ್ಯ ಹೈಕಮಾಂಡ್ ತೆಗೆದುಕೊಳ್ಲುವ ತೀರ್ಮಾನವನ್ನು ನಾನು ಮತ್ತು ಡಿ.ಕೆ.ಶಿವಕುಮಾರ್ ಅನುಸರಿಸುತ್ತೇವೆ ಎಂದರು.
ನಾಯಕತ್ವ ಬದಲಾವಣೆ ಕುರಿತ ವದಂತಿ, ಚರ್ಚೆ ವಿಚಾರ ಇಲ್ಲಿ ಅಪ್ರಸ್ತುತ. ಈ ವಿಚಾರ ಇಲ್ಲಿನ ಸಭೆಗೆ ಸಂಬಂಧಿಸಿದ್ದಲ್ಲ ಎಂದರು. ಈ ಬಗ್ಗೆ ಹೈಕಮಾಂಡ್ ನಿರ್ಣಯ ತೆಗೆದುಕೊಳ್ಳುತ್ತದೆ. ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಹೇಳಿದರು.