ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತ ಹಾಗೂ ಇಡಿಯಿಂದ ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರ ಮಧ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ಮುಡಾ ಆಯುಕ್ತರಿಗೆ ಪತ್ರದ ಮೂಲಕ ನಿವೇಶನಗಳನ್ನು ಹಿಂದಿರುಗಿಸುತ್ತೇನೆ ಎಂದು ಪತ್ರದ ಮೂಲಕ ತಿಳಿಸಿದ್ದಾರೆ.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಾನು ತಪ್ಪೇ ಮಾಡಿಲ್ಲ ಎಂದರೆ ರಾಜೀನಾಮೆ ಕೊಡು ಪ್ರಶ್ನೆ ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟನೆ ನೀಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಜಮೀನನ್ನು ಡಿ ನೋಟಿಫೈ ಮಾಡಿದ್ದರು. ಅವತ್ತು ಯಡಿಯೂರಪ್ಪ ತಪ್ಪು ಮಾಡಿದ್ದರು. ಆದರೆ ಈ ಪ್ರಕರಣದಲ್ಲಿ ನಾನು ತಪ್ಪು ಮಾಡಿಲ್ಲ ರಾಜಿನಾಮೆ, ಯಾಕೆ ನೀಡಬೇಕು ಕಾನೂನು ಹೋರಾಟ ಮಾಡುತ್ತೇನೆ ಎಂದು ಅವರು ಮತ್ತೆ ತಿಳಿಸಿದ್ದಾರೆ.
ಯಡಿಯೂರಪ್ಪನವರು ಡಿನೋಟಿಫೈ ಮಾಡಿದ್ದರು. ನಾನೇನಾದರೂ ಡಿನೋಟಿಫೈ ಮಾಡಿದ್ದೀನಾ? ಅಥವಾ ನಂದೇನಾದರೂ ಆದೇಶ ಇದೆಯಾ? ಅಥವಾ ನಂದೇನಾದರೂ ಪತ್ರ ವ್ಯವಹಾರ ಇದೆಯಾ? ಅಥವಾ ಮನಿಲ್ಯಾಂಡ್ ರಿಂಗ್ ಇದೆಯಾ? ಆ ಪ್ರಕರಣಕ್ಕೂ ಈ ಪ್ರಕರಣಕ್ಕೂ ಬಹಳ ವ್ಯತ್ಯಾಸ ಇದೆ.ಅವರು ಅನಗತ್ಯವಾಗಿ ರಾಜೀನಾಮೆ ಕೇಳುತ್ತಿದ್ದಾರೆ ಆದರೆ ನಾನು ತಪ್ಪೇ ಮಾಡಿಲ್ಲ. ಅಂದರೆ ರಾಜೀನಾಮೆಯಾಗಿ ಕೊಡಬೇಕು? ಆತ್ಮಸಾಕ್ಷಿಯಾಗಿ ನಾನು ಕೆಲಸ ಮಾಡುತ್ತಿದ್ದೇನೆ. ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದರು.