Ad imageAd image

ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರಿಗೆ ಸರ್ಕಾರ ಹಾಗೂ ಜನ ಬೇಕು : ಡಿಸಿಎಂ 

Bharath Vaibhav
ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರಿಗೆ ಸರ್ಕಾರ ಹಾಗೂ ಜನ ಬೇಕು : ಡಿಸಿಎಂ 
DKS
WhatsApp Group Join Now
Telegram Group Join Now

ಬೆಂಗಳೂರು: ಚಿತ್ರರಂಗದವರಿಗೆ ಆಹ್ವಾನವನ್ನೇ ಮಾಡಿಲ್ಲ ಎನ್ನುವ ನಾಗಭರಣ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಆಹ್ವಾನ ಮಾಡದೇ ಇರಬಹುದು. ಈ ಬಗ್ಗೆ ನಮ್ಮ ಇಲಾಖೆಯ ತಪ್ಪಿದೆಯೋ ಯಾರ ತಪ್ಪಿದೆ ಗೊತ್ತಿಲ್ಲ. ಆದರೆ ಈ ಕಾರ್ಯಕ್ರಮ ಅವರದ್ದು. ನನಗೆ ಗೊತ್ತು ಟೀಕೆ ಮಾಡುತ್ತಾರೆ.

ಆದರೆ ಎಚ್ಚರಿಕೆ ಕೊಡಬೇಕಲ್ಲವೇ? ಟೀಕೆ ಮಾಡುವುದರಿಂದ ನನಗೆ ಬೇಸರವಿಲ್ಲ. ನಾವು ತಪ್ಪು ಮಾಡಿದ್ದರೇ ಸರಿ ಮಾಡಿಕೊಳ್ಳೋಣ, ಅವರು ತಪ್ಪು ಮಾಡಿದ್ದರೆ ಅವರು ಸರಿ ಮಾಡಿಕೊಳ್ಳಲಿ. ಸಿನಿಮಾ ಇಲ್ಲದೇ ಬದುಕುವ ಶಕ್ತಿ ನನಗಿದೆ. ಅವರು ಬೆಳೆಯಬೇಕು ಎಂದರೆ ಸರ್ಕಾರ ಹಾಗೂ ಜನ ಬೇಕು” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಖಡಕ್ ಉತ್ತರ ನೀಡಿದರು.

ಬಿಬಿಎಂಪಿ ಸರ್ಕಾರಿ ಕಚೇರಿಗಳಿಗೆ ತೆರಿಗೆ ಬಾಕಿ ಬಗ್ಗೆ ನೋಟಿಸ್ ನೀಡಿರುವ ಬಗ್ಗೆ, “ಹೌದು ಹಣ ಸಂಗ್ರಹ ಮಾಡಬೇಕಲ್ಲವೇ. ಬಿಬಿಎಂಪಿ ಕಾನೂನು ಪ್ರಕಾರ ಕೆಲಸ ಮಾಡುತ್ತಿದೆ. ಸರ್ಕಾರಿ ಕಚೇರಿಯಾದರೂ ಒಂದಷ್ಟು ಬಿಲ್ ಗಳನ್ನು ಕಟ್ಟಲೇ ಬೇಕು. ವಿದ್ಯುತ್ ಬಿಲ್ ಸೇರಿದಂತೆ ಇತರೇ ಬಿಲ್ ಗಳನ್ನು ಕಟ್ಟಲೇಬೇಕು. ಈ ವಿಚಾರ ಕಳೆದ 20- 30 ವರ್ಷಗಳಿಂದ ನಡೆಯುತ್ತಿದೆ” ಎಂದರು.

ರಾಜಭವನ, ವಿಧಾನಸೌಧಗಳು ಈ ವ್ಯಾಪ್ತಿಗೆ ಬರುತ್ತವೆಯೇ ಎಂದಾಗ, “ಹೌದು ಎಲ್ಲರೂ ತೆರಿಗೆ ಪಾವತಿ ಮಾಡಲೇಬೇಕು” ಎಂದರು.

ಸರ್ಕಾರಿ ಕಟ್ಟಡಗಳ ಆಸ್ತಿ ತೆರಿಗೆ ಬಾಕಿ ರೂ.150 ಕೋಟಿಗೂ ಹೆಚ್ಚು ಬಾಕಿ ಇದೆ ಎಂದು ಮರು ಪ್ರಶ್ನಿಸಿದಾಗ, “ಎಲ್ಲವನ್ನು ಸಂಗ್ರಹ ಮಾಡಲಾಗುವುದು. ಯಾವುದಕ್ಕೂ ನಾವು ವಿನಾಯಿತಿ ನೀಡಬಾರದು. ಎಲ್ಲರೂ ತೆರಿಗೆ ಕಟ್ಟಲೇಬೇಕು. ವಿದ್ಯುತ್ ಪೂರೈಕೆದಾರರಿಗೆ ನಾವು ಬಿಲ್ ನೀಡದೇ ಇದ್ದರೇ ಶೇ 18 ರಷ್ಟು ಬಡ್ಡಿ ತೆರಬೇಕಾಗುತ್ತದೆ” ಎಂದರು.

 

WhatsApp Group Join Now
Telegram Group Join Now
- Advertisement -  - Advertisement - 
Share This Article
error: Content is protected !!