Ad imageAd image

ನಾನು 2 ದಿನದಲ್ಲಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ : ರಾಜು ಕಾಗೆ

Bharath Vaibhav
ನಾನು 2 ದಿನದಲ್ಲಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ : ರಾಜು ಕಾಗೆ
WhatsApp Group Join Now
Telegram Group Join Now

ಬೆಳಗಾವಿ : ವಸತಿ ಯೋಜನೆ ಅಡಿಯಲ್ಲಿ ಮನೆ ಹಂಚಿಕೆಯಲ್ಲಿ ಲಂಚ ಪಡೆದಿರುವ ಆರೋಪ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ರಾಜ್ಯ ಕಾಂಗ್ರೆಸ್ ಶಾಸಕರು ಸರ್ಕಾರದ ವಿರುದ್ಧವೇ ಅಸಮಾಧಾನ ಹೊರಹಾಕುತ್ತಿದ್ದು, ರಾಜೀನಾಮೆ ನೀಡುವ ಬೆದರಿಕೆ ಹಾಕುತ್ತಿದ್ದಾರೆ. ಇದೀಗ ಕಾಂಗ್ರೆಸ್ ಶಾಸಕರಾದಂತಹ ರಾಜು ಕಾಗೆ ರಾಜ್ಯದ ಇಂತಹ ಆಡಳಿತ ವ್ಯವಸ್ತೆಯಿಂದ ನನಗೆ ತುಂಬಾ ನೋವಾಗಿದೆ.

ಎರಡು ದಿನದಲ್ಲಿ ನಾನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಯಾವುದೇ ಆಶ್ಚರ್ಯವಿಲ್ಲ ಎಂದು ಸ್ಪೋಟಕವಾದ ಹೇಳಿಕೆ ನೀಡಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆಯ ಬಗ್ಗೆ ಅಸಮಧಾನ ಹೊರ ಹಾಕಿದ ಅವರು, ರಾಜಿನಾಮೆ ಬೆದರಿಕೆ ಹಾಕಿದ್ದಾರೆ. ಕಾಂಗ್ರೆಸ್ ಶಾಸಕ ರಾಜು ಕಾಗೆ ಸರ್ಕಾರದ ವಿರುದ್ಧ ಕಿಡಿ ಕಾರಿದ್ದಾರೆ. ಸ್ವಪಕ್ಷದ ಶಾಸಕರಿಂದಲೇ ಇದೀಗ ಅಸಮಾಧಾನ ಹೊರ ಬೀಳುತ್ತಿದೆ. ನಾನು ಸಹ ರಾಜೀನಾಮೆ ನೀಡುವ ಪರಿಸ್ಥಿತಿ ಬಂದಿದೆ.

ಎರಡು ದಿನದಲ್ಲಿ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಬೆಳಗಾವಿಯಲ್ಲಿ ಶಾಸಕ ರಾಜು ಕಾಗೆ ಅಸಮಾಧಾನ ಹೊರಹಾಕಿದ್ದಾರೆ.

ಶಾಸಕ ಬಿ.ಆರ್ ಪಾಟೀಲ್ ಬೆನ್ನಲ್ಲೇ ರಾಜು ಕಾಗೆ ಇದೀಗ ಹೊಸ ಬಾಂಬ್ ಸಿಡಿಸಿದ್ದು, ಬಿ ಆರ್ ಪಾಟೀಲ್ ಹೇಳಿದ್ದು ಸುಳ್ಳಲ್ಲ ಅವರು ನಿಜಾನೆ ಹೇಳಿದ್ದಾರೆ ನನ್ನ ಕ್ಷೇತ್ರಕ್ಕೆ 25 ಕೋಟಿ ಅನುದಾನ ಕೊಟ್ಟರು ಇನ್ನೂ ಆರ್ಡರ್ ಬಂದಿಲ್ಲ.
ರಾಜ್ಯದ ಎಲ್ಲಾ ಆಡಳಿತ ವ್ಯವಸ್ಥೆ ಸಂಪೂರ್ಣವಾಗಿ ವಿಫಲವಾಗಿದೆ ನನಗೆ ಇದರಿಂದ ತುಂಬಾ ಮನಸ್ಸಿಗೆ ನೋವಾಗಿದೆ. ನಾನು ಎರಡು ದಿನದಲ್ಲಿ ರಾಜೀನಾಮೆ ಕೊಟ್ಟರು ಆಶ್ಚರ್ಯವಿಲ್ಲ ಎಂದು ಹೇಳಿಕೆ ನೀಡಿದರು.

WhatsApp Group Join Now
Telegram Group Join Now
Share This Article
error: Content is protected !!